ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷದ (UPA) ಅಭ್ಯರ್ಥಿಯಾಗಿ ಮಾರ್ಗರೆಟ್ ಆಳ್ವಾ ಅವರು ಎಂದು NCP ಮುಖ್ಯಸ್ಥ ಶರದ್ ಪವಾರ್ ಭಾನುವಾರ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, 17 ಪಕ್ಷಗಳು ಈ ನಿರ್ಧಾರಕ್ಕೆ ಸರ್ವಾನುಮತವಿದೆ. “ಆಳ್ವಾ ಅವರು ಮಂಗಳವಾರ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮನಿರ್ದೇಶನವನ್ನು ಸಲ್ಲಿಸಲಿದ್ದಾರೆ” ಎಂದು ಹೇಳಿದರು.
ಮುಂದುವರೆದು, ನಾವು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ ಆದರೆ ಅವರು ಕೆಲವು ಸಮ್ಮೇಳನದಲ್ಲಿ ನಿರತರಾಗಿದ್ದರು. ನಾವು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಅವರು ಕೆಲವು ದಿನಗಳ ಹಿಂದೆ (ಯಶವಂತ್ ಸಿನ್ಹಾಗೆ) ಬೆಂಬಲವನ್ನು ಘೋಷಿಸಿದರು ಮತ್ತು ಈಗ ಶೀಘ್ರದಲ್ಲೇ ತಮ್ಮ ಬೆಂಬಲವನ್ನು (ಮಾರ್ಗರೆಟ್ ಆಳ್ವಾಗೆ) ಘೋಷಿಸುತ್ತಾರೆ ಎಂದು ಹೇಳಿದ್ದಾರೆ
ಇದಾದ ಬೆನ್ನಲ್ಲೇ ಶಿವಸೇನೆ ಸಂಸದ ಸಂಜಯ್ ರಾವುತ್ ಅವರು, ಈ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಂದಾಗಿವೆ ಎಂದು ಹೇಳಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಜುಲೈ 5 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಿನ್ನೆಯಷ್ಟೇ ಉಪ ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲರಾ ಜಗದೀಪ್ ಧನಕರ್ ಅವರನ್ನು ಆಯ್ಕೆ ಮಾಡಲಾಗಿದೆ.
Delhi | Opposition's candidate for the post of Vice President of India to be Margaret Alva: NCP chief Sharad Pawar pic.twitter.com/qkwyf7FMOw
— ANI (@ANI) July 17, 2022