ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ, ರೈತರ ಹೋರಾಟಕ್ಕೆ ಮಣಿದು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಘೋಷಿಸಿದ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಹಳೆಯ ವೀಡಿಯೊವನ್ನು ಮತ್ತೆ ಹಂಚಿಕೊಂಡಿದ್ದು ಈಗ ವೈರಲ್ ಆಗಿದೆ.
ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂಬ ಅನಿರೀಕ್ಷಿತ ಘೋಷಣೆಯ ನಂತರ ಜನವರಿಯಲ್ಲಿ ರಾಹುಲ್ ಗಾಂಧಿ ಮಾತನಾಡಿದ ವಿಡಿಯೊವೊಂದನ್ನು ಮತ್ತೆ ಪೋಸ್ಟ್ ಮಾಡಿದ್ದಯ ಅದರಲ್ಲಿ, ಈ ಕಾನೂನುಗಳನ್ನು ಸರ್ಕಾರವು ಹಿಂತೆಗೆದುಕೊಳ್ಳುತ್ತದೆ. ನಾನು ಹೇಳುತ್ತಿರುವುದನ್ನು ಸರಿಯಾಗಿ ನೆನಪಿಡಿ.” ಎಂದು ಇತ್ತಿ ಹೇಳಿದ್ದರು ಈಗ ಅವರ ಭವಿಷ್ಯ ನಿಜವಾಗಿದೆ.
ವೀಡಿಯೊದಲ್ಲಿ, “ರೈತರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಮತ್ತು ನಾನು ರೈತರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಮತ್ತು ನಾನು ಅವರೊಂದಿಗೆ ನಿಲ್ಲುತ್ತೇನೆ. ನಾನು ಅವರ ಸಮಸ್ಯೆಯನ್ನು ಪಂಜಾಬ್‌ನ ಯಾತ್ರೆಯಲ್ಲಿ ಪ್ರಸ್ತಾಪಿಸಿದ್ದೇನೆ ಮತ್ತು ನಾವು ಆ ಕುರಿತು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ. ನನ್ನ ಮಾತುಗಳನ್ನು ಸರಿಯಾಗಿ ಕೇಳಿಸಿಕೊಳ್ಳಿ. ಈ ಕಾನೂನುಗಳನ್ನು ಸರ್ಕಾರವು ಹಿಂತೆಗೆದುಕೊಳ್ಳುತ್ತದೆ. ನಾನು ಹೇಳುತ್ತಿರುವುದನ್ನು ಸರಿಯಾಗಿ ನೆನಪಿಡಿ.” ಎಂದಿದ್ದಾರೆ.
ಇಂದು ಬೆಳಗ್ಗೆ ಹಳೆ ವಿಡಿಯೋವನ್ನು ಮತ್ತೆ ಶೇರ್ ಮಾಡಿ “ದೇಶದ ಅನ್ನದಾತರು ತಮ್ಮ ಸತ್ಯಾಗ್ರಹದಿಂದ ದುರಹಂಕಾರವನ್ನು ಸೋಲಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು. ಜೈ ಹಿಂದ್, ಜೈ ಹಿಂದ್ ಕಾ ಕಿಸಾನ್!” ಎಂದು ಟ್ವೀಟ್ ಮಾಡಿದ್ದಾರೆ.
ಮೂರೂ ಕೃಷಿ ಕಾಯ್ದೆ ಗಳ ಉದ್ದೇ ಶ ರೈತರನ್ನು ಸಬಲೀಕರಣಗೊಳಿಸುವುದೇ ಆಗಿತ್ತು . ಅದರಲ್ಲೂ ಸಣ್ಣ ರೈತರಿಗೆ ಅನುಕೂಲಮಾಡಿಕೊಡುವುದು ನಮ್ಮ ಉದ್ದೇ ಶವಾಗಿತ್ತು . ‘ನಮ್ಮ ಅವಿರತ ಪ್ರಯತ್ನ ದಹೊರತಾಗಿಯೂ ಒಂದು ವರ್ಗದ ರೈತರ ಮನವೊಲಿಸಲು ಸಾಧ್ಯ ವಾಗಲಿಲ್ಲ ’ಎಂದುಮೋದಿ ಹೇಳಿದ್ದಾರೆ.
‘ನಮ್ಮ ರೈತ ಮಿತ್ರ ರಿಗೆ ಕೃಷಿ ಕಾಯ್ದೆ ಗಳ ಅನುಕೂಲದ ಬಗ್ಗೆ ವಿವರಿಸುವಲ್ಲಿ ನಮ್ಮ ಪ್ರಯತ್ನ ಸಾಕಾಗಲಿಲ್ಲವೇನೋ ಅನಿಸುತ್ತಿದೆ’ಎಂದಿದ್ದಾರೆ.
‘ಮೂರೂ ಕೃಷಿ ಕಾಯ್ದೆ ಗಳನ್ನು ಹಿಂಪಡೆಯುವ ನಿರ್ಧಾರ ಘೋಷಣೆಗಾಗಿ ನಾನು ಬಂದಿದ್ದೇ ನೆ. ಈ ತಿಂಗಳಾಂತ್ಯ ಕ್ಕೆ ಆರಂಭವಾಗಲಿರುವ ಸಂಸತ್ತಿನ ಅಧಿವೇಶನದಲ್ಲಿ ಕಾಯ್ದೆ ಗಳನ್ನು ಹಿಂಪಡೆಯಲು ಬೇಕಾದ ಸಾಂವಿಧಾನಿಕ ಪ್ರ ಕ್ರಿಯೆಗಳನ್ನು ಪೂರ್ಣಗೊಳಿಸುತ್ತೇ ವೆ’ಎಂದು ತಿಳಿಸಿದರು.
ರೈತರಿಗೆ ನೆರವಾಗುವ ಉದ್ದೇಶದಿಂದ ಹಾಗೂ ರೈತರನ್ನು ಸ್ವಾವಲಂಬಿಗಳನ್ನಾಗಿಸಲು ಎಪಿಎಂಸಿ ಕಾಯ್ದೆಯನ್ನು ಮೋದಿ ಸರಕಾರ ಜಾರಿಗೊಳಿಸಲು ಚಿಂತನೆ ನಡೆಸಿತ್ತು. ಆದರೆ, ಒಂದು ವರ್ಗದ ರೈತರಿಂದ ಮೂಡಿ ಬಂದ ವಿರೋಧ ಹಾಗೂ ನಿರಂತರವಾಗಿ ದಿಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ನಡೆದ ಪ್ರತಿಭಟನೆಗಳಿಂದ ಕೇಂದ್ರ ಸರಕಾರ ಇಂಥದ್ದೊಂದು ನಿರ್ಧಾರಕ್ಕೆ ಬಂದಿರಬಹುದೆಂದು ವಿಶ್ಲೇಷಸಲಾಗುತ್ತಿದೆ. ಅಲ್ಲದೆ ಬರುವ ಉತ್ತರ ಪ್ರದೇಶ ಹಾಗೂ ಪಂಜಾಬ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಂಥದ್ದೊಂದು ನಿರ್ಧಾರಕ್ಕೆ ಬಂದಿದೆ ಕೇಂದ್ರ ಸರಕಾರ. ಇಂದು ಪವಿತ್ರ ಗುರುಪೂರಬ್ ದಿನವಾಗಿದ್ದು, ಈ ದಿನವೇ ಗುರು ನಾನಕ್ ಅವರನ್ನು ನೆನಪಿಸಿಕೊಂಡು ಮೋದಿ ಪಂಜಾಬ್ನಲ್ಲಿ ಹೆಚ್ಚು ವಿರೋಧ ವ್ಯಕ್ತವಾಗುತ್ತಿರುವ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ.