ವಿದ್ಯುತ್ ಕಂಬಕ್ಕೆ ಮದುವೆ ದಿಬ್ಬಣದ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜಿಲ್ಲೆಯ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಬಳಿಯ ವಿದ್ಯುತ್ ಕಂಬಕ್ಕೆ ದಾವಣಗೆರೆಗೆ ತೆರಳುತ್ತಿದ್ದ ಮದುವೆ ದಿಬ್ಬಣದ ಬಸ್ ಡಿಕ್ಕಿಯಾಗಿದೆ. ಬಸ್ ಡಿಕ್ಕಿಯಾದ ರಭಕ್ಕೆ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಗಳುಗಳು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.