5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್‌ ಕಡ್ಡಾಯವಲ್ಲ:DGHS

ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ತಜ್ಞರು ಈಗಾಗಲೇ ಎಚ್ಚರಿಸಿದ್ದು, ಸಾಂಕ್ರಾಮಿಕ ರೋಗದ ವಿರುದ್ಧ ಧೈರ್ಯದಿಂದ ಹೋರಾಡಲು ಮಾಸ್ಕ್‌ ಅಗ್ಯವಿದ್ದರು 5 ವರ್ಷದೊಳಗಿನ ಮಕ್ಕಳಿಗೆ  ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಜಿಹೆಚ್ಎಸ್) ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.


ಹೊಸ ಮಾರ್ಗ ಸೂಚಿಯಲ್ಲಿರುವ ಪ್ರಮುಖ ಅಂಶಗಳು

ಡೈರೆಕ್ಟರೇಟ್ ಜನರಲ್ ಆಫ್ ಹೆಲ್ತ್ ಸರ್ವೀಸಸ್ (DGHS) ಮಾರ್ಗಸೂಚಿಗಳ ಪ್ರಕಾರ 5 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಶಿಫಾರಸು ಮಾಡಿಲ್ಲ.

6 ರಿಂದ 11 ವರ್ಷ ವಯಸ್ಸಿನ ಮಕ್ಕಳು ಪೋಷಕರು ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿ ಮಾಸ್ಕ್ ಧರಿಸಬಹುದು ಎಂದು ತಿಳಿಸಲಾಗಿದೆ. 12-17 ವರ್ಷ ವಯಸ್ಸಿನ ಮಕ್ಕಳು ವಯಸ್ಕರಂತೆಯೇ ಮಾಸ್ಕ್ ಧರಿಸಬೇಕೆಂದು ಹೇಳಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೋವಿಡ್ ಚಿಕಿತ್ಸೆಗಾಗಿ ರೆಮ್ಡೆಸಿವಿರ್ ನೀಡಬಾರದು ಮಕ್ಕಳಿಗೆ ಬೇಕಾಬಿಟ್ಟಿ ಸಿಟಿ ಸ್ಕ್ಯಾನ್ ಮಾಡಿಸಬಾರದು. ಗಂಭೀರ ಪ್ರಕರಣವಿದ್ದಲ್ಲಿ ಮಾತ್ರ ಎಚ್‌ಆರ್‌ಸಿಟಿ ಸ್ಕ್ಯಾನ್‌ ಮತ್ತು ಸ್ಟೆರಾಯ್ಡ್‌ ನೀಡಬಹುದು ಎಂದು ಮಾರ್ಗ ಸೂಚಿಯಲ್ಲಿ ಉಲ್ಲೇಖಿಸಿದೆ.

ಆದರೆ 18 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಕೋವಿಡ್‌ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು.  ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ, ಸ್ಯಾನಿಟೈಜರ್‌ ಬಳಕೆ,  ನೈರ್ಮಲ್ಯ ಕಾಪಾಡಿಕೊಳ್ಳುವುದು ಹಾಗು ಕೆಮ್ಮು ಬಂದಾಗ ಅಂತರ ಪಾಲಿಸುವುದು ಲಕ್ಷಣರಹಿತ, ಸೌಮ್ಯ, ಮಧ್ಯಮ, ತೀವ್ರ ರೋಗಿಗಳು ಕಡ್ಡಾಯವಾಗಿ ಅನುಸರಿಸಬೇಕೆಂದು ಸೂಚಿಸಲಾಗಿದೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...