ಪ್ರಬಲ ಭೂಕಂಪನದಿಂದ ತತ್ತರಿಸಿರುವ ಮ್ಯಾನ್ಮಾರ್ (Maynmar) ನಲ್ಲಿ ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದೆ. ಕಟ್ಟಡಗಳ ಅವಶೇಷಗಳ ಅಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ರಾಶಿ ರಾಶಿ ಮೃತದೇಹಗಳು ಪತ್ತೆಯಾಗಿವೆ.

ಸದ್ಯದ ಅಧಿಕೃತ ಮಾಹಿತಿಯ ಪ್ರಕಾರ ಮ್ಯಾನ್ಮಾರ್ ನಲ್ಲಿ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 3 ಸಾವಿರ ದಾಟಿದೆ.ಭೂಕಂಪದಲ್ಲಿ 3 ಸಾವಿರದ 85 ಮಂದಿ ಮೃತಪಟ್ಟಿದ್ದಾರೆ.
ಇನ್ನು ಭೂಕಂಪದಿಂದ 4,715 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, 341 ಮಂದಿ ನಾಪತ್ತೆಯಾಗಿದ್ದಾರೆ. ಮ್ಯಾನ್ಮಾರ್ ಮಿಲಿಟರಿಯಿಂದ ಭೂಕಂಪದಲ್ಲಿ ಸಾವನ್ನಪ್ಪಿದವರ ಅಂಕಿಅಂಶ ಬಿಡುಗಡೆ ಮಾಡಿದೆ.

ಆದರೇ, ಇದಕ್ಕಿಂತ ಹೆಚ್ಚಿನ ಜನರು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಅಲ್ಲಿನ ರಾಜಕೀಯ ಪಕ್ಷಗಳು ಹೇಳುತ್ತಿವೆ.ಸದ್ಯ ಮ್ಯಾನ್ಮಾರ್ ನಲ್ಲಿ ಮಿಲಿಟರಿ ಆಡಳಿತ ಜಾರಿಯಲ್ಲಿದೆ.