• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

ಪ್ರತಿಧ್ವನಿ by ಪ್ರತಿಧ್ವನಿ
September 28, 2024
in Top Story, ಇತರೆ / Others
0
Share on WhatsAppShare on FacebookShare on Telegram

ಚೆನ್ನೈ: ಶನಿವಾರ (ಸೆಪ್ಟೆಂಬರ್‌ 28) ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೆಟ್‌ ಲಿಮಿಟೆಡ್‌ (Tata Electronics Private Limited) ಘಟಕದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ (Fire Accident).

ADVERTISEMENT

ಸೆಲ್‌ಫೋನ್‌ ಉತ್ಪಾದನಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಉದ್ಯೋಗಿಗಳನ್ನುಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ.

ஒசூர் அருகே உள்ள டாடா தொழிற்சாலையில் பயங்கர தீ விபத்து

ஏராளமான பொருட்கள் தீயில் கருகி சேதம்

2 வாகனங்கள் மூலம் தீயை அணைக்கும் பணிகளில் தீயணைப்பு வீரர்கள் தீவிரம்#Hosur #Fireaccident #tata pic.twitter.com/aAeJ3IYqHc

— sathesh kumar (@sathesh1595) September 28, 2024

ಆಸ್ತಿಪಾಸ್ತಿಗೆ ಅಪಾರ ಹಾನಿಯಾಗಿದ್ದು, ಪ್ರಸ್ತುತ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ ಎಂದು ಸುದ್ದಿಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ. ನಾಗಮಂಗಲಂ ಬಳಿಯ ಉದ್ದನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಬಿಡಿಭಾಗಗಳ ಪೈಂಟಿಂಗ್‌ ಘಟಕದಲ್ಲಿ ಬೆಳಗ್ಗೆ 5: 30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ʼʼದಟ್ಟವಾದ ಹೊಗೆ ಇಡೀ ಪ್ರದೇಶವನ್ನು ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಎಲ್ಲ ಕಾರ್ಮಿಕರನ್ನು, ಉದ್ಯೋಗಿಗಳನ್ನು ಆವರಣದಿಂದ ಸ್ಥಳಾಂತರಿಸಲಾಯಿತು. ಏಳು ಅಗ್ನಿಶಾಮಕ ಘಟಕಗಳನ್ನು ನಿಯೋಜಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲʼʼ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಮೊದಲ ಪಾಳಿಯ ಸುಮಾರು 1,500 ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ವಕ್ತಾರರೊಬ್ಬರು ಮಾತನಾಡಿ, “ತಮಿಳುನಾಡಿನ ಹೊಸೂರಿನಲ್ಲಿರುವ ನಮ್ಮ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಮ್ಮ ಎಲ್ಲ ಉದ್ಯೋಗಿಗಳು ಸುರಕ್ಷಿತವಾಗಿರುವುದನ್ನು ಸಂಬಂಧಪಟ್ಟವರು ಖಚಿತಪಡಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ನಮ್ಮ ಉದ್ಯೋಗಿಗಳ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆʼʼ ಎಂದು ತಿಳಿಸಿದ್ದಾರೆ.

ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದ ಮೂವರು ಉದ್ಯೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಂಪನಿಯ ಆವರಣದಿಂದ ತೆರಳುವಂತೆ ಎಲ್ಲ ಉದ್ಯೋಗಿಗಳಿಗೆ ಸೂಚಿಸಲಾಗಿದೆ. ಐಫೋನ್‌ಗಾಗಿ ವಿವಿಧ ಬಿಡಿಭಾಗಗಳ ಉತ್ಪಾದನೆಯಲ್ಲಿ ತೊಡಗಿರುವ ಕಂಪನಿಯು ಸುಮಾರು 4,500 ಉದ್ಯೋಗಿಗಳನ್ನು ಹೊಂದಿದೆ. ಇದು 500 ಎಕರೆಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ದಿನದ 24 ಗಂಟೆಯೂ ತೆರೆದಿರುತ್ತದೆ.

Tags: #police departmentChennaifire accidentFire departmentTata Electronics Private Limited
Previous Post

ಚಾಲಕ ಸೇರಿದಂತೆ ಹೊತ್ತಿ ಉರಿದ ಕಾರು, ಜೀವ ಪಣಕ್ಕಿಟ್ಟು ಕಾಪಾಡಿದ ಸ್ಥಳೀಯರು

Next Post

IDFC ಲಿಮಿಟೆಡ್’ ಜೊತೆಗೆ ‘IDFC ಫಸ್ಟ್ ಬ್ಯಾಂಕ್’ ವಿಲೀನ, ಅಕ್ಟೋಬರ್ 1 ರಿಂದ ಜಾರಿ!

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post

IDFC ಲಿಮಿಟೆಡ್' ಜೊತೆಗೆ 'IDFC ಫಸ್ಟ್ ಬ್ಯಾಂಕ್' ವಿಲೀನ, ಅಕ್ಟೋಬರ್ 1 ರಿಂದ ಜಾರಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada