ಇಂದು ಮುಂಜಾನೆ ದೆಹಲಿಯ ಚಾಂದಿನ ಚೌಕ್ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣ ಮಾತ್ರದಲ್ಲಿ 80ಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು ಸುಟ್ಟು ಭಸ್ಮವಾಗಿದೆ. ಬೆಂಕಿಯನ್ನು ನಂದಿಸಲು 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಸುಮಾರು 8:45 ವೇಳೆಗೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ದೆಹಲಿಯ ಕೆಂಪುಕೋಟೆ ಎದುರಿನಲ್ಲಿರುವ ಲಜಪತ್ರಾಯ್ ಮಾರುಕಟ್ಟೆಯಲ್ಲಿ ಬೆಳಗಿನ ಜಾವ 4:45ರ ಸುಮಾರಿಗೆ ಘಟನೆ ನಡೆದಿದೆ. ಈ ಬಗ್ಗೆ ಮಾತನಾಡಿರುವ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಅತುಲ್ ಗರ್ಗ್, ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ಮಾಹಿತಿಯನ್ನ ನೀಡಿದ್ದಾರೆ.