ಕಳೆದ ಹಲವು ದಿನಗಳಿಂದ ಪಠ್ಯಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತವಾಗ್ತಿದ್ದು, ರಾಜ್ಯ ಸರ್ಕಾರದ ನಿರ್ಧಾರದ ವಿರೋಧಿಸಿ, ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಗೆ ನಡೆಸಲು ನಾಡಿನ ಸಾಹಿತಿಗಳು, ಪ್ರಗತಿಪರ ಚಿಂತಕರು, ಕನ್ನಡಪರ ಹೋರಾಟಗಾರರು ಇನ್ನಿತರೆ ಗಣ್ಯರು ತೀರ್ಮಾನಿಸಿದ್ದಾರೆ.
ಪರಿಷ್ಕೃತ ಪಠ್ಯವನ್ನ ಕೈಬಿಡುವಂತೆ, ನಾಡಿನ ಸಾಹಿತಿಗಳಿಗೆ ಹೋರಾಟಗಾರರಿಗೆ ಮತ್ತು ನಾಡ ಗೀತೆಗೆ ಅಪಮಾನ ಮಾಡಿದ ಸುಳ್ಳು ಹಿತಿಹಾಸ ಸೃಷ್ಠಿಸಿದ ರೋಹಿತ್ ಚಕ್ರತೀರ್ಥನನ್ನು ಬಂಧಿಸಿ ಮತ್ತು ಶಿಕ್ಷಣ ಸಚಿವರ ರಾಜಿನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲು ವಿಶ್ವಮಾನವ ಕ್ರಾಂತಿಕಾರಿ ಕುವೇಂಪು ಹೋರಾಟ ಸಮಿತಿಯಿಂದ ಪ್ರತಿಭಟನಾ ರ್ಯಾಲಿ ಕರೆ ಕೊಟ್ಟಿದೆ. ಇನ್ನು ಈ ಪ್ರತಿಭಟನಾ ರ್ಯಾಲಿ, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೆ ನಡೆಯಲಿದೆ.
ರ್ಯಾಲಿಯಲ್ಲಿ ಚಿಂತಕರು, ಸಾಹಿತಿಗಳು, ಕನ್ನಡಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ದಸಂಸ ಮತ್ತು ವಿವಿಧ ಸಂಘಟನೆಗಳು ಭಾಗಿಯಾಗಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಈ ಪ್ರತಿಭಟನೆಗೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿ ಸಾಧ್ಯತೆಯಿದೆ.