• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?||||ನಾಳೆ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನಿರ್ಧಾರ|

ಪ್ರತಿಧ್ವನಿ by ಪ್ರತಿಧ್ವನಿ
March 24, 2024
in ಕರ್ನಾಟಕ, ದೇಶ, ರಾಜಕೀಯ
0
ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?||||ನಾಳೆ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನಿರ್ಧಾರ|
Share on WhatsAppShare on FacebookShare on Telegram

||ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?||
||ನಾಳೆ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನಿರ್ಧಾರ||

ADVERTISEMENT

||ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಸೇರಿದ್ದ ಮಂಡ್ಯದ ಸಾವಿರಾರು ಕಾರ್ಯಕರ್ತರು||

||ಅಭ್ಯರ್ಥಿ ನೀವೇ ಆಗಬೇಕು ಎಂದು ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಿದ ಸಕ್ಕರೆನಾಡಿನ ಕಾರ್ಯಕರ್ತರು||

||ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ||

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು.

ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು.

ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ ನಮ್ಮ ಅಭ್ಯರ್ಥಿ ಎಂದು ಘೋಷಣೆಗಳನ್ನು ಕೂಗತೊಡಗಿದ ಕಾರ್ಯಕರ್ತರನ್ನು ಕೊನೆಗೆ ಕುಮಾರಸ್ವಾಮಿ ಅವರೇ ಸಮಾಧಾನಪಡಿಸಬೇಕಾಯಿತು.

ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಹೆಚ್ಚು ಮಾತನಾಡಲೂಬಾರದು ಎಂದು ವೈದ್ಯರು ನೀಡಿರುವ ಸಲಹೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಅವರು.

ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದರು ಅವರು.

ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರು ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ. ನಿಮ್ಮ ಆಸೆಗೆ ನಿರಾಸೆ ಮಾಡಲ್ಲ ಎಂದು ಮಂಡ್ಯದ ಸಭೆಯಲ್ಲೇ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ನುಡಿದರು.

ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಸೋಮವಾರ) ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಶೆ ಮಾಡಲ್ಲ ಎಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

||ನಿಖಿಲ್ ಕುಮಾರಸ್ವಾಮಿ ಹೇಳಿಕೆ||

ಇದಕ್ಕೂ ಮೊದಲು ಮಂಡ್ಯ ಕಾರ್ಯಕರ್ತರ ಜತೆ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು; ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ನಾಳೆ (ಸೋಮವಾರ) ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಚಿತಾವಣೆಯಿಂದಲೇ ನಾನು ಸೋತೆ. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿ ಸೊತಿದ್ದೀರಿ, ಈ ಬಾರಿ ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ನಾಳೆ ಸಂಜೆಯೊಳಗೆ ತಂದೆಯವರ ನಿರ್ಧಾರ ಗೊತ್ತಾಗಲಿದೆ ಎಂದು ಅವರು ನುಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹಿರಿಯ ನಾಯಕರು, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕರಾದ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಯುವ ಜನತಾದಳ ಅಧ್ಯಕ್ಷ ರವಿಕುಮಾರ್, ಹಿರಿಯ ಮುಖಂಡ ರಾಮಚಂದ್ರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ನೆರೆದಿದ್ದರು.*||ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?||* *||ನಾಳೆ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನಿರ್ಧಾರ||* *||ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಸೇರಿದ್ದ ಮಂಡ್ಯದ ಸಾವಿರಾರು ಕಾರ್ಯಕರ್ತರು||* *||ಅಭ್ಯರ್ಥಿ ನೀವೇ ಆಗಬೇಕು ಎಂದು ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಿದ ಸಕ್ಕರೆನಾಡಿನ ಕಾರ್ಯಕರ್ತರು||* *||ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ||* ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು. ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು. ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ ನಮ್ಮ ಅಭ್ಯರ್ಥಿ ಎಂದು ಘೋಷಣೆಗಳನ್ನು ಕೂಗತೊಡಗಿದ ಕಾರ್ಯಕರ್ತರನ್ನು ಕೊನೆಗೆ ಕುಮಾರಸ್ವಾಮಿ ಅವರೇ ಸಮಾಧಾನಪಡಿಸಬೇಕಾಯಿತು. ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಹೆಚ್ಚು ಮಾತನಾಡಲೂಬಾರದು ಎಂದು ವೈದ್ಯರು ನೀಡಿರುವ ಸಲಹೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಅವರು. ಮಂಡ್ಯದಲ್ಲಿ ನಮಗೆ ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದರು ಅವರು. ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರು ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ. ನಿಮ್ಮ ಆಸೆಗೆ ನಿರಾಸೆ ಮಾಡಲ್ಲ ಎಂದು ಮಂಡ್ಯದ ಸಭೆಯಲ್ಲೇ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ನುಡಿದರು. ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಸೋಮವಾರ) ಚನ್ನಪಟ್ಟಣ ಕ್ಷೇತ್ರದ ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಶೆ ಮಾಡಲ್ಲ ಎಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಭರವಸೆ ನೀಡಿದರು. *||ನಿಖಿಲ್ ಕುಮಾರಸ್ವಾಮಿ ಹೇಳಿಕೆ||* ಇದಕ್ಕೂ ಮೊದಲು ಮಂಡ್ಯ ಕಾರ್ಯಕರ್ತರ ಜತೆ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು; ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ನಾಳೆ (ಸೋಮವಾರ) ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. 2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಚಿತಾವಣೆಯಿಂದಲೇ ನಾನು ಸೋತೆ. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿ ಸೊತಿದ್ದೀರಿ, ಈ ಬಾರಿ ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ನಾಳೆ ಸಂಜೆಯೊಳಗೆ ತಂದೆಯವರ ನಿರ್ಧಾರ ಗೊತ್ತಾಗಲಿದೆ ಎಂದು ಅವರು ನುಡಿದರು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹಿರಿಯ ನಾಯಕರು, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕರಾದ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಯುವ ಜನತಾದಳ ಅಧ್ಯಕ್ಷ ರವಿಕುಮಾರ್, ಹಿರಿಯ ಮುಖಂಡ ರಾಮಚಂದ್ರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ನೆರೆದಿದ್ದರು.

Tags: BJPcongressCongress PartyJDSkarnatakapoliticskumaraswamyMandyaMandyaconstituencyNikhilkumaraswamyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ನಾಳೆ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ.. KRPP ಪಕ್ಷ ವಿಲೀನ..

Next Post

ರಸ್ತೆಯಲ್ಲಿ ಹಾರ್ನ್‌ ಮಾಡುವ ಮುಂಚೆ ಹುಷಾರ್.. ಏನ್‌ ಬೇಕಿದ್ರೂ ಆಗುತ್ತೆ..

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ರಸ್ತೆಯಲ್ಲಿ ಹಾರ್ನ್‌ ಮಾಡುವ ಮುಂಚೆ ಹುಷಾರ್.. ಏನ್‌ ಬೇಕಿದ್ರೂ ಆಗುತ್ತೆ..

ರಸ್ತೆಯಲ್ಲಿ ಹಾರ್ನ್‌ ಮಾಡುವ ಮುಂಚೆ ಹುಷಾರ್.. ಏನ್‌ ಬೇಕಿದ್ರೂ ಆಗುತ್ತೆ..

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada