• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

ಪ್ರತಿಧ್ವನಿ by ಪ್ರತಿಧ್ವನಿ
July 30, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ, ವಾರದಲ್ಲಿ ಸಿಎಂ ಜತೆ ಚರ್ಚೆ

ADVERTISEMENT

ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ ಯೋಜನೆಗಳು ಸೇರಿದಂತೆ ಹಲವು ಮಹತ್ತ್ವದ ಉದ್ಯಮಗಳಿಗೆ ಸರಕಾರ ಕೊಡುವ ರಿಯಾಯಿತಿಗಳ ಕುರಿತ ನೀತಿಯನ್ನು ರೂಪಿಸಲಾಗುತ್ತಿದೆ. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಕೈಗಾರಿಕಾ ಮತ್ತು ಐಟಿ-ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ವಿಸ್ತೃತ ಹೂಡಿಕೆ- ಪ್ರೋತ್ಸಾಹನಾ ನೀತಿಗೆ ಸಂಬಂಧಿಸಿದ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ಇದಾದ ಕೂಡಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿಸ್ತೃತವಾಗಿ ಚರ್ಚಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (Industrial Minister M B Patil) ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (IT BT Minister Priyanka Kharge) ತೀರ್ಮಾನಿಸಿದ್ದಾರೆ.

ಎರಡೂ ಇಲಾಖೆಗಳು ಜತೆಗೂಡಿ ಜಾರಿಗೊಳಿಸಬೇಕಾದ ಹಲವು ಯೋಜನೆಗಳು ಮತ್ತು ರೂಪಿಸಬೇಕಾದ ಉಪಕ್ರಮಗಳ ಕುರಿತು ಇಬ್ಬರೂ ಸಚಿವರು ಬುಧವಾರ ಇಲ್ಲಿನ ಖನಿಜ ಭವನದಲ್ಲಿ ಮಹತ್ತ್ವದ ಸಭೆ ನಡೆಸಿದರು.

ಐಟಿ ಇಲಾಖೆಯು ಇಎಸ್‌ಡಿಎಂ ವಲಯಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹನಾ ಕ್ರಮಗಳ ನೀತಿಯನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗಿ ಕೈಗಾರಿಕಾ ಇಲಾಖೆ ಕೂಡ ವಿದ್ಯುನ್ಮಾನ ತಯಾರಿಕೆ ವಲಯದಲ್ಲಿ ಹೂಡಿಕೆ ಆಕರ್ಷಣೆಗೆ ಕಾರ್ಯತಂತ್ರ ರೂಪಿಸಬೇಕಾದ ಅಗತ್ಯವಿದೆ. ಕೆಲವೆಡೆಗಳಲ್ಲಿ ಒಂದೇ ಯೋಜನೆಗೆ ಐಟಿ ಮತ್ತು ಕೈಗಾರಿಕೆ ಇಲಾಖೆಗಳೆರಡೂ ರಿಯಾಯಿತಿಗಳನ್ನು ಕೊಡುತ್ತಿದ್ದು, ಇದನ್ನು ಸರಿ ಮಾಡಬೇಕಾಗಿದೆ ಎನ್ನುವ ಅಭಿಪಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ನಮ್ಮಲ್ಲಿ ತಯಾರಾಗುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಶೇಕಡ 44ರಷ್ಟು ಅಮೆರಿಕಕ್ಕೆ ರಫ್ತಾಗುತ್ತಿದೆ. ಇದರಲ್ಲಿ ಮೊದಲು ಶೇ.61ರಷ್ಟು ಪಾಲು ಹೊಂದಿದ್ದ ಚೀನಾದ ಪ್ರಮಾಣ ಈಗ ಶೇ.25ಕ್ಕೆ ಕುಸಿದಿದೆ. ಆದರೆ, ವಿಯಟ್ನಾಂನ ಪಾಲು ಮಾತ್ರ ಶೇ.50ರಷ್ಟಿದೆ. ಈ ಸ್ಪರ್ಧೆಯನ್ನು ಪರಿಗಣಿಸಿ ಬಂಡವಾಳವನ್ನು ಸೆಳೆಯಬೇಕಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಇದಕ್ಕೆ ಪೂರಕವಾಗಿ ಈ ಕ್ಷೇತ್ರಕ್ಕೆ ಹಲವು ರಿಯಾಯಿತಿಗಳನ್ನು ಘೋಷಿಸಬೇಕಾಗಿದೆ ಎಂದು ಇಬ್ಬರೂ ಸಚಿವರು ಅಭಿಪ್ರಾಯಪಟ್ಟರು.

ಸ್ಪೇಸ್‌ ಪಾರ್ಕ್‌(Space Park), ಪಿಸಿಬಿ ಪಾರ್ಕ್‌ಗೆ ಭೂಮಿ

ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, ತಮ್ಮ ಇಲಾಖೆಯು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್‌ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್‌ ಪಾರ್ಕ್‌, ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್‌ ಸರ್ಕ್ಯೂಟ್‌ ಬೋರ್ಡ್‌ (ಪಿಸಿಬಿ) ಪಾರ್ಕ್‌, ಕ್ವಿನ್‌ ಸಿಟಿ / ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆಗಳಲ್ಲಿ ತಲಾ 100 ಎಕರೆಯಲ್ಲಿ ಗ್ಲೋಬಲ್‌ ಇನ್ನೋವೇಶನ್‌ ಸಿಟಿ, ಅಡಕನಹಳ್ಳಿ/ ಕೋಚನಹಳ್ಳಿಯಲ್ಲಿ 100 ಎಕರೆಯಲ್ಲಿ ಕಿಯೋನಿಕ್ಸ್‌ ಪ್ಲಗ್‌ & ಪ್ಲೇ ಸೌಲಭ್ಯ ಕೇಂದ್ರದ ಅಭಿವೃದ್ಧಿ ಮೂಲಕ ʻಗ್ಲೋಬಲ್‌ ಕೇಪಬಿಲಿಟಿ ಸೆಂಟರ್‌ʼಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕಾಗಿ ಈ ಸ್ಥಳಗಳಲ್ಲಿ ಜಮೀನನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಪಾಟೀಲ ಅವರಲ್ಲಿ ಕೋರಿದರು.

ಡ್ರೋನ್‌ ಪರೀಕ್ಷಾ ಕೇಂದ್ರವು ನಿರ್ಜನ ಪ್ರದೇಶದಲ್ಲಿ ಇರಬೇಕು ಎನ್ನುವ ನಿಯಮವಿದೆ. ಆದ್ದರಿಂದ ಬೆಂಗಳೂರಿನ ಭಾಗವೇ ಆಗಿರುವ ಹೆಸರಘಟ್ಟದಲ್ಲಿ ಈ ಯೋಜನೆ ಬರುವುದು ಕಷ್ಟವಾಗಬಹುದು. ಆದ್ದರಿಂದ ಇದಕ್ಕೆ ಸೂಕ್ತ ಜಾಗ ಹುಡುಕುವುದು ಸೂಕ್ತ ಎಂದೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಕೈಗಾರಿಕೆಗಳಿಗೆ ನೀರು ಪೂರೈಕೆಗೆ ಕ್ರಮ

ಡೇಟಾ ಸೈನ್ಸ್‌, ತಯಾರಿಕಾ ಸ್ಥಾವರಗಳು ಸೇರಿದಂತೆ ಕೈಗಾರಿಕೆಗಳು ಬೆಳೆಯಬೇಕೆಂದರೆ ವಿದ್ಯುತ್‌ ಮತ್ತು ನೀರಿನ ಭಾರೀ ಅಗತ್ಯವಿದೆ. ಹೀಗಾಗಿ ರಾಜ್ಯದಲ್ಲಿ ʻಕೈಗಾರಿಕಾ ನೀರು ಭದ್ರತಾ ಕಾಯ್ದೆʼಯನ್ನು (ಇಂಡಸ್ಟ್ರಿಯಲ್‌ ವಾಟರ್‌ ಸೆಕ್ಯುರಿಟಿ ಪಾಲಿಸಿ) ರೂಪಿಸುವ ಮತ್ತು ಕೈಗಾರಿಕಾ ಮರುಬಳಕೆ ವಿದ್ಯುತ್‌ ಉತ್ಪಾದನಾ ಪಾರ್ಕ್‌ ಸ್ಥಾಪಿಸುವ ಅಗತ್ಯ ಇದೆ. ನೈಸರ್ಗಿಕ ಅನಿಲದಿಂದ ವಿದ್ಯುತ್‌ ತಯಾರಿಸುವ ನಿಟ್ಟಿನಲ್ಲಿ ಗಂಬೀರವಾದ ಚರ್ಚೆ ಅಗತ್ಯ ಇದೆ. ಈ ಸಂಬಂಧ ಯೋಜನೆ ರೂಪಿಸುವಂತೆ ಇಬ್ಬರೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ನೀರು ಪೂರೈಕೆ ಯೋಜನೆಯಡಿಯಲ್ಲಿ ಉದ್ಯಮಗಳಿಗೆ ಶೇಕಡ 50ರಷ್ಟು ನೀರನ್ನು ನಾವು ಪೂರೈಸುತ್ತೇವೆ. ಉಳಿದ ಶೇಕಡ 50ರಷ್ಟನ್ನು ಕೈಗಾರಿಕೆಗಳೇ ಸಂಸ್ಕರಿಸಿ, ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಿಗೆ ನೀರು ಪೂರೈಸಲು ಈಗಾಗಲೇ 2500 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ಅಂತಹ ಮಾದರಿಯ ಸಾಧ್ಯತೆಗಳ ಬಗ್ಗೆ ಗಂಭೀರ ಆಲೋಚನೆ ನಡೆದಿದೆ ಎಂದು ಪಾಟೀಲ ಅವರು ಮಾಹಿತಿ ನೀಡಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ, ಐಟಿ ಇಲಾಖೆ ನಿರ್ದೇಶಕ ರಾಹುಲ್ ಸಂಕನೂರು ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Tags: 60 seconds mb patilM B PatilMB Patilmb patil​mb patil 60 secondsmb patil bijapurmb patil chit chatmb patil congressmb patil fansmb patil housemb patil interviewmb patil karnatakamb patil latestmb patil latest newsmb patil meetingmb patil ministermb patil mlamb patil newsmb patil news todaymb patil oathmb patil press meetmb patil sonmb patil speechmb patil today newsmb patil todays newsmb patil videomb patil videosmbpatilMinister MB Patil
Previous Post

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

Next Post

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

Related Posts

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
0

ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ  ಸಭೆ...

Read moreDetails

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
Next Post

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

Recent News

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada