• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮಾಧ್ಯಮಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿ ಕೋರ್ಟ್‌ ಸ್ಥಾನವನ್ನು ಆವರಿಸಿಕೊಂಡಿದೆ : ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ

ಪ್ರತಿಧ್ವನಿ by ಪ್ರತಿಧ್ವನಿ
July 23, 2022
in ದೇಶ
0
ಸಂವಿಧಾನಕ್ಕೆ ಮಾತ್ರ ನ್ಯಾಯಾಂಗ ಉತ್ತರ : ರಾಜಕೀಯ ಪಕ್ಷಗಳ ವಿರುದ್ಧ ಸಿಜೆಐ ರಮಣ ವಾಗ್ದಾಳಿ
Share on WhatsAppShare on FacebookShare on Telegram

ಮಾಧ್ಯಮಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿ ಕೋರ್ಟ್‌ ಸ್ಥಾನವನ್ನು ಆವರಿಸಿಕೊಂಡಿದೆ. ಕಾಂಗರೂ ಕೋರ್ಟ್​​ನಂತೆ ಇವು ತಮಗಿಷ್ಟ ಬಂದಂತೆ ಪ್ರಚಾರ ಮಾಡುತ್ತಾ, ತಮ್ಮ ಅಜೆಂಡಾವನ್ನು ಜನರ ಮೇಲೆ ಹೇರುತ್ತಾ ಕಟ್ಟೆ ಪಂಚಾಯಿತಿ ನಡೆಸಿ ಭಾರತದ ಪ್ರಜಾಪ್ರಭುತ್ವ ಅಪಾಯವನ್ನುಂಟು ಮಾಡುತ್ತಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಹೇಳಿದ್ದಾರೆ.

ADVERTISEMENT

ರಾಂಚಿಯಲ್ಲಿ ನಡೆದ ಶೈಕ್ಷಣಿಕ ಸಮಾರಂಭದಲ್ಲಿ ಉಪನ್ಯಾಸ ಮಾಡಿದ ರಮಣ ಮಾತನಾಡಿ, ಮಾಧ್ಯಮಗಳು ಕಾಂಗರೂ ನ್ಯಾಯಾಲಯಗಳನ್ನು ನಡೆಸುವುದನ್ನು ನಾವು ನೋಡುತ್ತೇವೆ. ಕೆಲವೊಮ್ಮೆ ಅನುಭವಿ ನ್ಯಾಯಾಧೀಶರು ಸಹ ಸಮಸ್ಯೆಗಳ ಬಗ್ಗೆ ತೀರ್ಮಾನ ನೀಡಲು ಕಷ್ಟವಾಗುತ್ತದೆ. ಆದರೆ, ಮಾಧ್ಯಮಗಳಿಗೆ ಆ ಹಕ್ಕು ಇಲ್ಲದಿದ್ದರೂ ಹಲವು ಪ್ರಕರಣಗಳಲ್ಲಿ ಕೋರ್ಟ್​ಗಿಂತಲೂ ಮೊದಲೇ ತೀರ್ಪು ನೀಡುವುದನ್ನು ನಾವು ನೋಡಬಹುದು ಎಂದು ಅವರು ಹೇಳಿದ್ದಾರೆ.

ಮುಂದುವರೆದು, ಮಾಧ್ಯಮಗಳು ತನ್ನ ಜವಾಬ್ದಾರಿಯನ್ನು ಉಲ್ಲಂಘಿಸಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ. ” ತಮಗಿಷ್ಟ ಬಂದಂತೆ ಪ್ರಚಾರ ಮಾಡುತ್ತಾ, ತಮ್ಮ ಅಜೆಂಡಾವನ್ನು ಜನರ ಮೇಲೆ ಹೇರಿ ಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತವೆ ಮತ್ತು ವ್ಯವಸ್ಥೆಗೆ ಹಾನಿ ಮಾಡುತ್ತಿವೆ” ಎಂದು ಅವರು ಹೇಳಿದರು.

“ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸಂಘಟಿತ ಪ್ರಚಾರ ನಡೆಯುತ್ತಿದೆ. ಅದಕ್ಕೆ ನ್ಯಾಯಮೂರ್ತಿಗಳು ತಕ್ಷಣವೇ ಪ್ರತಿಕ್ರಿಯಿಸುವುದಿಲ್ಲ. ದಯವಿಟ್ಟು ಅದನ್ನು ದೌರ್ಬಲ್ಯ – ಅಸಹಾಯಕತೆ ಎಂದು ತಪ್ಪಾಗಿ ಗ್ರಹಿಸಬೇಡಿ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ಮುದ್ರಣ ಮಾಧ್ಯಮವು ಇನ್ನೂ ಸ್ವಲ್ಪ ಮಟ್ಟಿಗೆ ಹೊಣೆಗಾರಿಕೆಯನ್ನು ಹೊಂದಿದೆ ಎಂಬುದನ್ನು ಗಮನಿಸಿದ ಮುಖ್ಯ ನ್ಯಾಯಾಧೀಶರು, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳು ಜವಾಬ್ದಾರಿಯುತವಾಗಿ ವರ್ತಿಸುವಂತೆ ನಾನು ಒತ್ತಾಯಿಸುತ್ತೇನೆ. ಎಲೆಕ್ಟ್ರಾನಿಕ್ ಮಾಧ್ಯಮವು ಜನರಿಗೆ ಶಿಕ್ಷಣ ನೀಡಲು ಮತ್ತು ರಾಷ್ಟ್ರಕ್ಕೆ ಶಕ್ತಿ ತುಂಬಲು ತಮ್ಮ ಧ್ವನಿಯನ್ನು ಬಳಸಿಕೊಳ್ಳಬೇಕು. ಅದು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಾರತೀಯ ಜನತಾ ಪಕ್ಷದ ವಕ್ತಾರ ನೂಪುರ್ ಶರ್ಮಾ ಅವರನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರೊಂದಿಗೆ ಪಾರ್ದಿವಾಲಾ ಅವರು ಪೀಠ ತೀವ್ರವಾಗಿ ಖಂಡಿಸಿತ್ತು. ಆಕೆಯ ಹೇಳಿಕೆಯು ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರ ಮತ್ತು ಅಶಾಂತಿಗೆ ಕಾರಣವಾಗಿದೆ ಇದಕ್ಕೆ ಕ್ಷಮೆಯಾಚಿಸಬೇಕು ಎಂದು ಮೌಖಿಕವಾಗಿ ಆದೇಶಿಸಿತ್ತು.

ಸುಪ್ರೀಂ ಕೋರ್ಟ್‌ನ ಮೌಖಿಕ ಅವಲೋಕನಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಖಂಡಿಸಿ ಅನೇಕರು ಪೋಸ್ಟ್‌ ಹಾಕಿದ್ದರು. ನಂತರ ಮೀಡಿಯಾಗಳು ಅದನ್ನು ವರದಿ ಮಾಡಿದ್ದವು. ಶರ್ಮಾ ವಿರುದ್ಧ ಮಾಡಿರುವ ಅವಲೋಕನಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಮನವಿಯನ್ನೂ ಸಲ್ಲಿಸಲಾಗಿತ್ತು.

Tags: BJPCongress PartyCovid 19ಕೋರ್ಟ್‌ಕೋವಿಡ್-19ನರೇಂದ್ರ ಮೋದಿಪ್ರಜಾಪ್ರಭುತ್ವಬಿಜೆಪಿ
Previous Post

78 ವರ್ಷದಲ್ಲಿ ದೇಶದ ಜನಸಂಖ್ಯೆ 41 ಕೋಟಿ ಕುಸಿತ: ವರದಿ

Next Post

ವಿಜಯೇಂದ್ರ ಸ್ಪರ್ಧೆ ಹೈಕಮಾಂಡ್‌ ನಿರ್ಧಾರ: ಯಡಿಯೂರಪ್ಪ ಯುಟರ್ನ್‌!

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್ ಯಡಿಯೂರಪ್ಪ ಪತ್ರ

ವಿಜಯೇಂದ್ರ ಸ್ಪರ್ಧೆ ಹೈಕಮಾಂಡ್‌ ನಿರ್ಧಾರ: ಯಡಿಯೂರಪ್ಪ ಯುಟರ್ನ್‌!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada