• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಧ್ಯಮಗಳ ಮುಂದಿನ ಚರ್ಚೆಯಿಂದ ರಾಜಕೀಯ ನಡೆಯುವುದಿಲ್ಲ:ಡಿಸಿಎಂ ಡಿ. ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 29, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ದೆಹಲಿ:”ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ADVERTISEMENT

ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗೂ ಹಾಗೂ ಯಾರಿಗೂ ಸೂಕ್ತವಾದುದಲ್ಲ” ಎಂದು ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಸಮಾವೇಶದ ಬಗ್ಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಾಧನ ಸಮಾವೇಶವು ಸಿದ್ದರಾಮಯ್ಯ ಅವರ ಸಮಾವೇಶವಾಗಿ ಬದಲಾಗಿದೆ ಎನ್ನುವ ಕುರಿತು ಅಸಮಾಧಾನ ಹೊಂದಿರುವ ಪತ್ರವು ಎಐಸಿಸಿಗೆ ಬಂದಿದೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಆದರೆ, ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ. ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿ ಮಾಡಿ ಮೂರು ನಾಲ್ಕು ದಿನಗಳಾಗಿವೆ. ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೆ ಇರುತ್ತದೆ” ಎಂದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯ ಬಗ್ಗೆ ಕೇಳಿದಾಗ, “ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮಾ ಗಾಂಧಿಯವರು ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲು ಅವರನ್ನು ಭೇಟಿಯಾಗಿದ್ದೆ.

ಡಿಸೆಂಬರ್ 28 ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ. ಆದ ಕಾರಣ ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿ ತೆಗೆದುಕೊಂಡ ಸಲಹೆ, ಸೂಚನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಚರ್ಚೆ ಮಾಡಿದೆ. ಸುಮಾರು 300 ಕ್ಕೂ ಹೆಚ್ಚು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ನಾವು ಈ ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎನ್ನುವ ಅಭಿಲಾಷೆಯನ್ನು ಹೊಂದಿದ್ದೇವೆ.ಈ ಬಗ್ಗೆ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಅವರು ಹೇಳಿದ್ದಾರೆ.ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಒಟ್ಟಿಗೆ ಈ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದರು.

ಸಂಪುಟ ವಿಸ್ತರಣೆ ಸಂದರ್ಭ ಒದಗಿ ಬಂದಿಲ್ಲ:ಸಂಪುಟ ವಿಸ್ತರಣೆಯ ಬಗ್ಗೆ ಕೇಳಿದಾಗ, “ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ. ಈಗ ಆ ಸಂದರ್ಭ ಒದಗಿ ಬಂದಿಲ್ಲವಲ್ಲ. ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ” ಎಂದು ತಿಳಿಸಿದರು.

ನೀರಾವರಿ ವಿಚಾರವಾಗಿ ಮನವಿ ಸಲ್ಲಿಸಲು ಪ್ರಧಾನಿಗಳ ಭೇಟಿ:

ಪ್ರಧಾನಿ ಮೋದಿ ಅವರ ಭೇಟಿಯ ಬಗ್ಗೆ ಕೇಳಿದಾಗ, “ರಾಜ್ಯದ ವಿಚಾರಗಳು ಹಾಗೂ ಮುಖ್ಯವಾಗಿ ನೀರಾವರಿ ವಿಚಾರವಾಗಿ ಮನವಿಯನ್ನು ಸಲ್ಲಿಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ. ಗುರುವಾರದಂದು ಕೇಂದ್ರ ಅರಣ್ಯ ಸಚಿವರಾದ ಭೂಪೇಂದರ್ ಯಾದವ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ – ಬಂಡೂರಿ ವಿಚಾರವಾಗಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳನ್ನು ನಿವಾರಿಸಬೇಕು ಎಂದು ಮನವಿ ಸಲ್ಲಿಸಿದ್ದೆವು. ಇದಕ್ಕೆ ಇಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು” ಎಂದರು.

“ರಾಂಚಿಯಲ್ಲಿ ನಡೆದ ಹೇಮಂತ್ ಸೋರೆನ್ ಅವರ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ರಾಹುಲ್ ಗಾಂಧಿ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ನಾನು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು. ಇಂಡಿಯಾ ಒಕ್ಕೂಟದ ನಾಯಕರು ಭಾಗವಸಿ ಹೇಮಂತ್ ಅವರಿಗೆ ಶುಭ ಕೋರಿದೆವು” ಎಂದು ತಿಳಿಸಿದರು.

Tags: AICC had received a letterDCM D.K ShivakumarKarnataka BhavanKPCC presidentMedia's further discussionministers KN RajannaPolitics
Previous Post

ಪಂಜಿನ ಮೆರವಣಿಗೆಯಲ್ಲಿ ಭಾರೀ ಅಗ್ನಿ ಅವಘಡ, 30ಕ್ಕೂ ಹೆಚ್ಚು ಮಂದಿ ಸುಟ್ಟು ಗಾಯ!

Next Post

ಸರ್‌ ನೀವು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿನಾ ರಾಜಣ್ಣ ಏನಂದ್ರು..!

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post

ಸರ್‌ ನೀವು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿನಾ ರಾಜಣ್ಣ ಏನಂದ್ರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada