ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಮೆಡಿಕಲ್ ಕಾಲೇಜು ಮತ್ತು ಆರೋಗ್ಯ ಸಂಬಂಧಿಸಿದ ಕಾಲೇಜು ಪ್ರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದಲ್ಲಿ ಕರೋನ ಸೋಂಕಿನ ಪಾಸಿಟಿವಿಟಿ ರೇಟ್ ಕಡಿಮೆಯಾಗಿರೋ ಕಾರಣ, ಕೆಲ ನಿರ್ಭಂದಗಳೊಂದಿಗೆ ಅನ್ ಲಾಕ್ 3.0 ಜಾರಿಗೊಳಿಸಿ ಆರ್ಥಿಕ ಚಟುವಟಿಕೆಗಳಿಕೆ ಅವಕಾಶ ಮಾಡಿಕೊಟ್ಟಿತ್ತು. ಇದೀಗ ಮುಂದುವರೆದು, ರಾಜ್ಯ ಸರ್ಕಾರ ಆರೋಗ್ಯ ಮತ್ತು ಮೆಡಿಕಲ್ ವಲಯಕ್ಕೆ ಸಂಬಂಧಿಸಿದ ಎಲ್ಲಾ ತರಹದ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿಸಿ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದು, ಕೊರೋನಾ ಸೋಂಕಿನ ಪಾಸಿಟಿವಿಟಿ ದರಗಳ ಇಳಿಕೆಯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಮೆಡಿಕಲ್ ವಲಯವಾದ ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್ನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಟಿಟ್ಯೂಷನ್, ಕಾಲೇಜು ಇತರೆ ಸಂಸ್ಥೆಗಳು ಕೂಡಲೇ ತೆರೆಯಲು ಈ ಕೆಳಗಿನ ಷರತ್ತುಗಳೊಂದಿಗೆ ಅನುಮತಿಸಿದೆ.
ಕಾಲೇಜುಗಳಿಗೆ ಆಗಮಿಸುವಂತ ವಿದ್ಯಾರ್ಥಿಗಳು, ಟೀಚಿಂಗ್ ಸ್ಟಾಫ್, ನಾನ್ ಟೀಚಿಂಗ್ ಸ್ಟಾಪ್ ಅಲ್ಲದೇ ಇತರೆ ಸಿಬ್ಬಂದಿಗಳು ಕನಿಷ್ಠ ಪಕ್ಷ ಒಂದು ಡೋಸ್ ಕೊರೋನಾ ಲಸಿಕೆ ಪಡೆದಿರಬೇಕು.
ಹೀಗೆ ತೆರೆಯುವಂತ ಕಾಲೇಜು, ಇನ್ಟಿಟ್ಯೂಟ್ ಗಳು ಕಡ್ಡಾಯವಾಗಿ ಕೊರೋನಾ ಮಾರ್ಗಸೂಚಿ ನಿಯಮವನ್ನು ಪಾಲಿಸಬೇಕು.
ಈ ಮೇಲ್ಕಂಡ ಷರತ್ತುಗಳೊಂದಿಗೆ ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ಕಾಲೇಜುಗಳನ್ನು ತೆರೆಯುವುದಕ್ಕೆ ಅನುಮತಿಸಲಾಗಿದೆ. ಒಂದು ವೇಳೆ ಕರೋನ ಸೋಂಕಿನ ಮಾರ್ಗಸೂಚಿ ಪಾಲಿಸದೇ ಇದ್ದಲ್ಲಿ, ಅಂತಹ ಕಾಲೇಜು, ಇನ್ಟಿಟ್ಯೂಷನ್ ವಿರುದ್ಥ ಕರೋನ ಸೋಂಕಿನ ನಿಯಂತ್ರಣ ಕಾನೂನು ಕ್ರಮ ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಐಪಿಸಿ ಸೆಕ್ಷನ್ 188 ರಡಿಯಲ್ಲಿಯೂ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.