ಬೆಂಗಳೂರು: ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್ಎಸ್ ಅಧಿಕಾರಿ ಮೀನಾಕ್ಷಿನೇಗಿ (Senior IFS Officer Meenakshi Negi) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1989ರ Batchನ ಕರ್ನಾಟಕ ಕೇಡರ್ನ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ ಉತ್ತರಾಖಂಡದವರಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಈಗ ಆ ಸೇವೆಯಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದೀಗ ಕರ್ನಾಟಕದ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

ಮೀನಾಕ್ಷಿ ನೇಗಿ ಅವರು ಕರ್ನಾಟಕ ಕೇಡರ್ನ ಅಧಿಕಾರಿಯಾಗಿ 35 ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಿದ್ದಾರೆ. ದಕ್ಷ ಅಧಿಕಾರಿಯೆಂದು ಹೆಸರು ಮಾಡಿರುವ ಮೀನಾಕ್ಷಿ ನೇಗಿ ಬಳ್ಳಾರಿ(Ballary), ಚಿಕ್ಕಮಗಳೂರು(Chikkamagaluru), ಮಂಡ್ಯ(Mandya)ದಲ್ಲಿ ಡಿಸಿಎಫ್ (DCF) ಆಗಿ ಕೆಲಸ ಮಾಡಿದ್ದಾರೆ.