• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾ.ಪಂ ನೌಕರರ, ಕಾರ್ಮಿಕರ, ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಿ: ಬಂಡೆಪ್ಪ ಖಾಶೆಂಪುರ್

ಪ್ರತಿಧ್ವನಿ by ಪ್ರತಿಧ್ವನಿ
October 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ :ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ, ಕಾರ್ಮಿಕರ ಗ್ರಾಮ ಪಂಚಾಯತಿ ಅಧ್ಯಕ್ಷರ, ಸದಸ್ಯರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು.

ADVERTISEMENT

ಬೀದರ್ ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಕಳೆದ ಕೆಲ ದಿನಗಳಿಂದ ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಗಳ ನೇತೃತ್ವದಲ್ಲಿ ಆರ್.ಡಿ.ಪಿ.ಆರ್ ಕುಟುಂಬದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ’ದ ಸ್ಥಳಕ್ಕೆ ಗುರುವಾರ ಭೇಟಿ ನೀಡಿ, ಹೋರಾಟಗಾರರ ಬೇಡಿಕೆಗಳ ಮಾಹಿತಿ ಪಡೆದು ಅವರು ಮಾತನಾಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳು, ಕಂಪ್ಯೂಟರ್ ಆಪರೇಟರ್ ಗಳು, ವಾಟರ್ ಮ್ಯಾನ್ ಗಳು, ಸ್ವಚ್ಚತಾ ಕರ್ಮಿಗಳು ಸೇರಿದಂತೆ ಎಲ್ಲರೂ ಸೇರಿ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನು ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಈಗಿನ ಸರ್ಕಾರ ಐದು ಗ್ಯಾರಂಟಿಗಳನ್ನು ಕೊಟ್ಟು ಆಡಳಿತ ನಡೆಸುತ್ತಿರುವುದನ್ನು ನೋಡಿದರೆ, ಈಗ ಹೋರಾಟ ನಡೆಸುತ್ತಿರುವ ನಿಮ್ಮ ಬೇಡಿಕೆಗಳು ಆ ಗ್ಯಾರಂಟಿಗಳ ನಾಲ್ಕಾಣೆ ಭಾಗದಷ್ಟು ಕೂಡ ಅಲ್ಲ. ಅಷ್ಟೊಂದು ದೊಡ್ಡಮಟ್ಟದ ಬೇಡಿಕಗಳು ಕೂಡ ನಿಮ್ಮ ಬೇಡಿಕೆಗಳು ಅಲ್ಲ.

ಇಲ್ಲಿ ನಾನು ರಾಜಕೀಯ ಭಾಷಣ ಮಾಡಲು ಬಂದಿಲ್ಲ. ರಾಜ್ಯದಲ್ಲಿ ರೈತರು ಸೇರಿದಂತೆ ಯಾವ್ಯಾವ ವರ್ಗ, ಯಾವ್ಯಾವ ಅಧಿಕಾರಿಗಳು ಎಷ್ಟರ ಮಟ್ಟಿಗೆ ಸಮಸ್ಯೆಯಲ್ಲಿ ಇದ್ದಾರೆ. ಅವರ ಸಮಸ್ಯೆಗಳನ್ನು ಹೇಗೆ ಬಗೆಹರಿಸಲು ಪ್ರಯತ್ನಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕಾಗಿತ್ತು. ಆದರೇ ಈ ಸರ್ಕಾರ ಮೂಡಾ ಕೇಸ್, ಆ ಕೇಸ್, ಈ ಕೆಸ್ ಅಂತ ಕೇಸ್ ಗಳಲ್ಲೇ ಬ್ಯೂಸಿ ಆಗಿದೆ. ನೌಕರರ ಸಮಸ್ಯೆಗಳನ್ನು ಆಲಿಸಲು ಇವರಿಗೆ ಸಮಯವಿಲ್ಲ.ಯಾರು ಏನೇ ಟೀಕೆ ಮಾಡಿದ್ರು, ಸರ್ಕಾರ ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು. ಈಗಿನ ಗ್ರಾಮೀಣಾಭಿವೃದ್ಧಿ ಮಂತ್ರಿಗಳು ಬಹಳಷ್ಟು ಇಂಟಲಿಜೆಂಟ್ ಇದ್ದಾರೆ. ಅವರು ಈ ಸಮಸ್ಯೆಗಳನ್ನು ಯಾವತ್ತೋ ಪರಿಹರಿಸಬೇಕಾಗಿತ್ತು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮಾರ್ಮಿಕವಾಗಿ ನುಡಿದರು.

ನಾನು ನಮ್ಮ ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿರುವ ಸುರೇಶ್ ಬಾಬುರವರಿಗೆ ನಿಮ್ಮ ಹೋರಾಟದ ಕುರಿತು ಮಾಹಿತಿ ನೀಡುತ್ತೇನೆ. ಮುಂಬರುವ ಅಧಿವೇಶನದಲ್ಲಿ ನಿಮ್ಮ ಪರವಾಗಿ ಧ್ವನಿ ಎತ್ತುವಂತೆ ನಮ್ಮ ಪಕ್ಷದ ಶಾಸಕರುಗಳಿಗೆ ತಿಳಿಸುತ್ತೇನೆ. ನಮ್ಮ ಪಕ್ಷ ನಿಮ್ಮ ಪರವಾಗಿ ಧ್ವನಿ ಎತ್ತುತ್ತದೆ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಹೋರಾಟಗಾರರಿಗೆ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಬಸವಕಲ್ಯಾಣ ಇಒ ರಮೇಶ್ ಎಂ, ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಶಿವಶೆಟ್ಟಿ ಶೀತಾ, ಜಿಲ್ಲಾ ಖಜಾಂಚಿ ದೇವಪ್ಪ ಚಾಂಬಾಳೆ, ಪ್ರಮುಖರಾದ ಶ್ರೀನಿವಾಸ್ ರೆಡ್ಡಿ, ಮೀನಾಕ್ಷಿ ಪಾಟೀಲ್, ಧನರಾಜ್ ವಗ್ಗೆ, ರವಿಕಿರಣ್, ಕನಕರಾಯ ಕನಸಾವಿ, ರಮೇಶ್ ರಾಠೋಡ್, ವಿಜಯಕುಮಾರ್ ಚಾಂಗಲೇರಾ, ದತ್ತಾತ್ರೇಯ ಪೂಜಾರಿ, ಮಲ್ಲಪ್ಪ ಸೋನ್ನದ್, ವೀರಶೆಟ್ಟಿ, ವಿಜಯಕುಮಾರ್, ರಾಮಣ್ಣ ಸೇರಿದಂತೆ ಅನೇಕರಿದ್ದರು.

Tags: Bandappa Khashempur.Chiefs Srinivas ReddyDattatreya PujariDhanraj VaggeDistrict Treasurer Devappa ChambaleEO Ramesh MKanakaraya KanasaviMallappa Sonna dMeenakshi PatilPresident Shivshetty SheetaRamannaRamesh RathodRavikiranVeerashettyVijayakumarVijayakumar Changalera
Previous Post

ಪ್ರತಿದಿನ ಒಂದು ಹಿಡಿಯಷ್ಟು ಮಖಾನ ಸೇವಿಸುವುದರಿಂದ, ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ನಿಮ್ಮದಾಗುತ್ತದೆ.

Next Post

ಹೆದ್ದಾರಿಯಲ್ಲಿ ಪುಂಡರ ವ್ಹೀಲಿಂಗ್‌;ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಹೆದ್ದಾರಿಯಲ್ಲಿ ಪುಂಡರ ವ್ಹೀಲಿಂಗ್‌;ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada