
ಬೆಳಗಾವಿ : ರಾಜ್ಯಪಾಲರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳ ಸುರಕ್ಷಿತ ಪ್ರಯಾಣದ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಸಮಿತಿಯು ಬೆಳಗಾವಿಯ ಸುವರ್ಣಸೌಧದಲ್ಲಿ ಮಂಗಳವಾರ ಸಭೆ ಸೇರಿ ಸಮಾಲೋಚನೆ ನಡೆಸಿತು.

ನಗರದ ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯುವ ಸಂಬಂಧ ಚರ್ಚಿಸಲಾಯಿತು. ಈ ವೇಳೆಯಲ್ಲಿ ಸಚಿವರಾದ ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.










