ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳಿಗೆ ಶಾಕಿಂಗ್ ಮಾಹಿತಿ ನೀಡಿದ್ದಾರೆ. ತಾನು ಮಾರಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದಾಗಿ ಹೇಳಿಕೆಕೊಂಡಿದ್ದಾರೆ.
ಹೈದರಾಬಾದ್ನಲ್ಲಿ ನಡೆದಿದ್ದ ಸ್ಟಾರ್ ಕ್ಯಾನ್ಸರ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಚಿರಂಜೀವಿ ಈ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾರೆ.
ಕ್ಯಾನ್ಸರ್ ಕಾಯಿಲೆ ಇರುವುದು ನನಗೆ ಮೊದಲ ಹಂತದಲ್ಲಿಯೇ ತಿಳಿಯಿತು.


ಹೀಗಾಗಿ ನಾನು ಆ ಕಾಯಿಲೆಯಿಂದ ಹೊರಬರಲು ಸಾಧ್ಯವಾಯ್ತು , ಆಸ್ಪತ್ರೆಯಲ್ಲಿ ನನ್ನನ್ನು ನಾನು ನೋಡಿಕೊಂಡಾಗ ನನಗೆ ಅಳುವೇ ಬಂದಿತ್ತು ಎಂದು ಹೇಳಿದ್ದಾರೆ. ಚಿರಂಜೀವಿಗೆ ಯಾವ ಕ್ಯಾನ್ಸರ್ ಬಂದಿತ್ತು ಹಾಗೂ ಯಾವಾಗ ಅವರು ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದರು ಎಂಬುದಕ್ಕೆ ಇನ್ನೂ ಯಾವುದೇ ಮಾಹಿತಿಯನ್ನು ಬಾಯ್ಬಿಟ್ಟಿಲ್ಲ.