• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಮೇಘ” ಚಿತ್ರ ನವೆಂಬರ್ 29ರಂದು ತೆರೆಗೆ.

ಪ್ರತಿಧ್ವನಿ by ಪ್ರತಿಧ್ವನಿ
November 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಚರಣ್ ನಿರ್ದೇಶನದ, ಕಿರಣ್ ರಾಜ್ – ಕಾಜಲ್ ಕುಂದರ್ ನಾಯಕ – ನಾಯಕಿಯಾಗಿ ನಟಿಸಿರುವ ಹಾಗೂ ಕೃಷಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಯತೀಶ್ ಹೆಚ್ ಆರ್ ನಿರ್ಮಿಸಿರುವ ‘ಮೇಘ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ತ್ರಿವಿಕ್ರಮ ಸಾಫಲ್ಯ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.ಟ್ರೇಲರ್ ನಲ್ಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆಯಾಗುತ್ತಿದೆ.ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ನಮ್ಮ ಕೃಷಿ ಪ್ರೊಡಕ್ಷನ್ಸ್ ನ ಚೊಚ್ಚಲ ನಿರ್ಮಾಣದ ಚಿತ್ರ “ಮೇಘ”. ಈ ಚಿತ್ರವನ್ನು ನೋಡಿದ‌ ಕೆಲವರ ಜೀವನದಲ್ಲಿ ಕೆಲವು ಬದಲಾವಣೆ ‌ಆಗಬಹುದು‌. ಪ್ರೀತಿಸುತ್ತಿಲ್ಲದವರು ಪ್ರೀತಿಸಲು ಆರಂಭಿಸಬಹುದು. ಸ್ನೇಹಿತರೊಂದಿಗೆ ಮಾತು ಬಿಟ್ಟವರು ಮಾತಾಡಲು‌ ಶುರು ಮಾಡಬಹುದು. ಹೀಗೆ ಸ್ನೇಹ, ಪ್ರೀತಿ ಹಾಗೂ ಬಾಂಧವ್ಯಗಳ ಸಮ್ಮಿಲನದ ನಮ್ಮ ಚಿತ್ರ ಇದೇ ನವೆಂಬರ್ 29ರಂದು ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಯತೀಶ್ ಹೆಚ್ ಆರ್.

” ಮೇಘ” ಚಿತ್ರ ಉತ್ತ‌ಮ ಮನೋರಂಜನೆಯೊಂದಿಗೆ ಕೂಡಿದ ಕೌಟುಂಬಿಕ ಚಿತ್ರ.ಈ ಪರಿಶುದ್ಧ ಪ್ರೇಮ‌ ಕಥಾನಕದ ವಿಶೇಷವೆಂದರೆ ನಾಯಕನ ಹೆಸರು “ಮೇಘ”.‌ನಾಯಕಿಯ ಹೆಸರು ” ಮೇಘ”. ಇಬ್ಬರ ಹೆಸರು “ಮೇಘ” ಏಕೆ? ಅಂತ ಚಿತ್ರ ನೋಡಿದಾಗ ತಿಳಿಯುವುದು. ನನ್ನ‌ ಸ್ನೇಹಿತನ ಜೀವನದಲ್ಲಿ ನಡೆದ ಘಟನೆ ಈ ಕಥೆಗೆ ಸ್ಪೂರ್ತಿ. ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ನವೆಂಬರ್ 29 ರಂದು ತೆರೆಗೆ ಬರಲಿದೆ.ಸಹಕಾರ ನೀಡಿದ ಚಿತ್ರತಂಡದ ಸದಸ್ಯರಿಗೆ ಧನ್ಯವಾದ ತಿಳಿಸಿದರು ನಿರ್ದೇಶಕ ಚರಣ್.

ನಾನು ಈ ಚಿತ್ರದ ಕಥೆಯನ್ನು ಎಂಟು ಸರಿ ಕೇಳಿದ್ದೆ. ಆನಂತರ ನಟಿಸಲು ಒಪ್ಪಿಕೊಂಡಿದ್ದು ಎಂದು ಮಾತು ಆರಂಭಿಸಿದ ನಾಯಕ ಕಿರಣ್ ರಾಜ್, ಪ್ರೀತಿಯಲ್ಲಿ ಜೋಶ್ ಗಿಂತ ಅನುಭವ ಮುಖ್ಯ. ತಂದೆ ತಾಯಿ ಹಾಗೂ‌ ಮಕ್ಕಳಲ್ಲಿ ಉತ್ತಮ ಬಾಂಧವ್ಯ ಇದ್ದರೆ ಎಷ್ಟೋ ಅನಾಹುತಗಳನ್ನು ತಡೆಯಬಹುದು ಈ ರೀತಿ ಹಲವು ವಿಷಯಗಳನ್ನು “ಮೇಘ” ಚಿತ್ರದಲ್ಲಿ ನಿರ್ದೇಶಕರು ಸುಂದರವಾಗಿ ನಿರೂಪಿಸಿದ್ದಾರೆ.ಎಲ್ಲರೂ ತಪ್ಪದೇ ಚಿತ್ರಮಂದಿರದಲ್ಲೇ ನಮ್ಮ ಚಿತ್ರ ನೋಡಿ ಎಂದರು.

ನನ್ನದು ಈ ಚಿತ್ರದಲ್ಲಿ ಕಾಲೇಜು ಹುಡುಗಿಯ ಪಾತ್ರ. ನನ್ನ ಹೆಸರು “ಮೇಘ” ಎಂದರು ನಾಯಕಿ ಕಾಜಲ್ ಕುಂದರ್.ಚಿತ್ರದ ಸಂಕಲನಕಾರ ಹಾಗೂ ಛಾಯಾಗ್ರಾಹಕ ಗೌತಮ್ ನಾಯಕ್, ವಿತರಕ ಮನೋಜ್, ನೃತ್ಯ ನಿರ್ದೇಶಕ ಬಾಲು, ಹಿನ್ನೆಲೆ ಸಂಗೀತ ನೀಡಿರುವ ಫ್ಲಾಂಕಿನ್ ರಾಕಿ ಮುಂತಾದವರು “ಮೇಘ” ಚಿತ್ರದ ಬಗ್ಗೆ ಮಾತನಾಡಿದರು.

Tags: background scorer Flankin Rocky.choreographer Baludirected by Charandistributor ManojFilm editor and cinematographer Gautam NayakKiran Raj starrerMegha" will hit the screens on November 29.produced by Yatish HRsandalowwodstarring Kiran Rajtrailer of 'Megha'
Previous Post

ಮುಂಜಾನೆ ಕಾಲಿನ ಕಾಲಿನಚೀಲದಲ್ಲಿ ಈರುಳ್ಳಿ ಇಡುವ ಪರಂಪರೆ:ವಾಸ್ತವವೋ ಅಥವಾ ನಂಬಿಕೆಯೋ?

Next Post

ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋದು ಯಾರು? 

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
Next Post
ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋದು ಯಾರು? 

ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋದು ಯಾರು? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada