ಕಾಂಗ್ರೆಸ್ಸಿನ ಮೇಕೆದಾಟು ಪಾದಯಾತ್ರೆಗೆ ಕೊನೆಗೂ ತಡೆ ಬಿದ್ದಿದೆ. ಕೋವಿಡ್ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಇಂದಿಗೆ ಮೊಟಕುಗೊಳಿಸುವ ತೀರ್ಮಾನಕ್ಕೆ ಕೈ ನಾಯಕರು ಬಂದಿದ್ದಾರೆ.
ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬೆಳಗ್ಗೆ ಈ ಕುರಿತು ಸಭೆ ನಡೆಯಿತು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರ ಸಮ್ಮುಕದಲ್ಲಿ ನಡೆದ ಸಭೆಯಲ್ಲಿ ಪಾದಯಾತ್ರೆಯನ್ನು ಸದ್ಯಕ್ಕೆ ಮೊಟಕುಗೊಳಿಸುವ ನಿರ್ಧಾರಕ್ಕೆ ಕಾಂಗ್ರೆಸ್ಸಿನ ಹಿರಿಯ ನಾಯಕರು ಬಂದಿದ್ದಾರೆ.
ಇದೇ ವಿಚಾರವಾಗಿ ಹೈಕೋರ್ಟ್ ಕೂಡ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಬುಧವಾರ ಚಾಟಿ ಬೀಸಿತ್ತು. ಹೀಗಾಗಿ ಪಾದಯಾತ್ರೆ ಸಂಬಂಧ ಇಂದು ಸಭೆ ಕರೆದು ಈ ನಿರ್ಧಾರ ಪ್ರಕಟಿಸಲಾಗಿದೆ.






