ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಆದಿಯಾಗಿ ಅತಿ ಉತ್ಸಾಹದಿಂದ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆ ಬೆಂಗಳೂರು ತಲುಪುವ ಸಾಧ್ಯತೆ ಕ್ಷೀಣಿಸಿದೆ. ಯಶಸ್ವಿಯಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಪಾದಯಾತ್ರೆಗೆ ಸರ್ಕಾರ ಕಡಿವಾಣ ಹಾಕಲು ಸಜ್ಜಾಗಿದೆ.
ಹೌದು, ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಹೈಕೋರ್ಟ್ ಇಂದು ಚಾಟಿ ಬೀಸಿದೆ. ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ತಡೆಗಟ್ಟಲು ಯಾವ ಯಾವ ನಿಯಮಗಳನ್ನು ಸರ್ಕಾರ ತಗೆದುಕೊಂಡಿದೆ? ಹಾಗೆಯೇ ಪಾದಯಾತ್ರೆ ವೇಳೆ ಕಾಂಗ್ರಸ್ ತಗೆದುಕೊಂಡಿರುವ ಸುರಕ್ಷತಾ ಕ್ರಮಗಳೇನು? ಈ ಬಗ್ಗೆ ಪೂರ್ಣ ವಿವರ ತಿಳಿಸಬೇಕು ಎಂದು ಬೊಮ್ಮಾಯಿ ಸರ್ಕಾರಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹೈಕೋರ್ಟ್ ಸೂಚಿಸಿದೆ.
ವಕೀಲ್ ಶ್ರೀಧರ್ ಪ್ರಭು ಎಂಬುವವರು ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯಿಂದ ಕೋವಿಡ್ ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ. ಇದಕ್ಕೆ ತಡೆ ನೀಡಬೇಕು ಎಂದು ಕೋರಿ ಮನವಿ ಮಾಡಿದ್ದರು. ಈ ವಿಚಾರವಾಗಿ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿ ಸರ್ಕಾರ ಹಾಗೂ ಕಾಂಗ್ರೆಸ್ ಗೆ ಚಾಟಿ ಬೀಸಿದೆ.
ಅರ್ಜಿ ವಿಚಾರಣೆಗೆ ಎತ್ತಿಕೊಳ್ಳುತ್ತಿದ್ದಂತೆ ಶ್ರೀಧರ್ ಪ್ರಭು ಅವರು “ಸಾಕಷ್ಟು ಜನಸಂಖ್ಯೆಯಲ್ಲಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಇದರಿಂದ ಕೋವಿಡ್ ವ್ಯಾಪಕವಾಗಿ ಹರಡಬಹುದು. ಹಾಗಾಗಿ, ಈ ಪಾದಯಾತ್ರೆಗೆ ತಡೆ ನೀಡಬೇಕು ಎಂದು ತಿಳಿಸಿದರು. ಅವರ ಮಾತನ್ನು ಆಲಿಸಿದ ಹೈಕೋರ್ಟ್ ಕಾಂಗ್ರೆಸ್ ನವರು ಪಾದಯಾತ್ರೆ ಮಾಡಲು ಯಾವ ಆಧಾರದ ಮೇಲೆ ಅನುಮತಿ ನೀಡಿದಿರಿ?, ಇದನ್ನು ತಡೆಯಲು ಈವರೆಗೂ ಯಾಕೆ ಸೂಕ್ರ ಕ್ರಮಗಳನ್ನು ಕೈಗೊಂಡಿಲ್ಲ? ಕೋವಿಡ್ ನಿರ್ವಹಣೆಯಲ್ಲಿ ಏನೇನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬುದನ್ನು ಎರಡು ದಿನದಲ್ಲಿ ವರದಿ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಹೈಕೋರ್ಟ್ ಈ ರೀತಿ ಚಾಟಿ ಬೀಸುತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮೇಕೆದಾಟು ಪಾದಾಯಾತ್ರೆಗೆ ಕಡಿವಾಣ ಹಾಕುವ ನಿರ್ಧಾರ ತಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ಈಗ ನೇರವಾಗಿ ಹೇಳಿರುವಾಗ ಬಿಜೆಪಿಗೆ ಮತ್ತಷ್ಟು ದಾರಿ ಸುಲಭವಾಗಿದ್ದು, ಪಾದಯಾತ್ರೆ ಬೆಂಗಳೂರು ತಲುಪದಂತೆ ತಡೆಹಿಡಿಯಲು ಸರ್ಕಾರವು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಬಹುದು.
ಈ ವಿಚಾರವಾಗಿ ʼಪ್ರತಿಧ್ವನಿʼಯು ವಕೀಲ ಶ್ರೀಧರ ಪ್ರಭು ಅವರನ್ನು ಸಂಪರ್ಕಿಸಿದಾಗ, “ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ನಾನು ಮಾಡಿ ಹೈಕೋರ್ಟ್ ಗಮನ ಸೆಳೆದಿರುವೆ. ಮಕ್ಕಳನ್ನು ಸೇರಿಸಿಕೊಂಡು ಪಾದಯಾತ್ರೆ ಮಾಡಲಾಗುತ್ತಿದೆ. ಇದರಿಂದ ಸಹಜವಾಗಿ ಕೋವಿಡ್ ಹರಡಲು ಕಾರಣವಾಗುತ್ತದೆ. ಈ ಬಗ್ಗೆ ಎರಡು ದಿನದಲ್ಲಿ ವರದಿ ನೀಡಲು ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೈಕೋರ್ಟ್ ಸೂಚಿಸಿದೆ. ಸರ್ಕಾರವು ಇನ್ನಾದರೂ ಕಠಿಣ ನಿರ್ಧಾರ ತಗೆದುಕೊಳ್ಳುತ್ತಾ? ಅಥವಾ ಕಳ್ಳ ಪೊಲೀಸ್ ಆಟವಾಡುತ್ತಾ ಎಂಬುದನ್ನು ಕಾದುನೋಡಬೇಕು ಎಂದು ಅಭಿಪ್ರಾಯ ಪಟ್ಟರು.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ನಿರ್ಬಂಧ ಹೇರಿರುವ ಮಧ್ಯೆಯೂ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕೆಪಿಸಿಸಿ ಭಾನುವಾರದಿಂದ 10 ದಿನಗಳ ಪಾದಯಾತ್ರೆ ಆರಂಭಿಸಿದೆ. ‘ನಮ್ಮ ನೀರು ನಮ್ಮ ಹಕ್ಕು’ ಎಂಬ ಘೋಷದೊಂದಿಗೆ ನಡೆಯುತ್ತಿರುವ ಪಾದಯಾತ್ರೆಯ ನೇತೃತ್ವವವನ್ನು ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಹಿಸಿದ್ದಾರೆ.
ಮೂರನೇ ದಿನವಾದ ಸೋಮವಾರ ನೀರಿಗಾಗಿ ನಡಿಗೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನ 64 ನಾಯಕರ ವಿರುದ್ಧ ಕನಕಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ. ಸುರೇಶ್, ಎಸ್. ರವಿ, ಧ್ರುವನಾರಾಯಣ ಜೊತೆಗೆ ಮೈಸೂರು ಭಾಗದ ನಾಯಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು ಮೊದಲಾದ ಮುಖಂಡರ ಮೇಲೂ ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ. ಹಾಗೆಯೇ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮಂಜುನಾಥ್ ಮೊದಲಾದವರ ಹೆಸರೂ ಎಫ್ ಐಆರ್ ನಲ್ಲಿದೆ.