‘ನೀರಿಗಾಗಿ ನಡಿಗೆ’ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ. ಆದರೆ ಸಿದ್ದರಾಮಯ್ಯ ಅವರು ನಾಲ್ಕು ಕಿ.ಮೀ. ನಡೆಯುವಷ್ಟರಲ್ಲಿ ಸುಸ್ತಾಗಿದ್ದಾರೆ. ಸುಸ್ತಾಗಿ ಕುಳಿತ ಅವರನ್ನು ಕಾರಿನಲ್ಲಿ ವಾಪಸ್ ಕರೆದುಕೊಂಡು ಹೋಗಲಾಯಿತು. To view our full games selection, please visit our Online Games casinodulacleamy.com page.
ಹೌದು, ಮೇಕೆದಾಟು ಪಾದಯಾತ್ರೆ ನೇತೃತ್ವ ವಹಿಸಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು 15 ಕಿಲೋಮೀಟರ್ ಪಾದಯಾತ್ರೆ ಮಾಡಬೇಕಿತ್ತು ಆದರೆ 4 ಕಿಲೋಮೀಟರ್ಗೆ ಸುಸ್ತಾದ ಸಿದ್ದರಾಮಯ್ಯ ಅವರು ಕಾರಿನಲ್ಲಿ ವಾಪಸ್ ತೆರಳಿದ್ದರು.
ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ಸಿದ್ದರಾಮಯ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.