• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೀರಿಗಾಗಿ ನಡಿಗೆ, ಹಿಂದೆ ಸರಿವ ಪ್ರಶ್ನೆಯೇ ಇಲ್ಲ : ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
January 5, 2022
in ಕರ್ನಾಟಕ
0
ಪ್ರತಿ ಸನ್ನಿವೇಶದಲ್ಲೂ ಯುವಕರ ಪಾಲುದಾರಿಕೆ ಇದೆ ಎಂದು ತೋರಿಸಿಕೊಟ್ಟದ್ದೇ ರಾಜೀವ್ ಗಾಂಧಿ – ಡಿ ಕೆ ಶಿವಕುಮಾರ್
Share on WhatsAppShare on FacebookShare on Telegram

ಇದು ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ಸ್ ಇಲ್ಲ. ಬಿಜೆಪಿಯವರು ರಾಜಕಾರಣ ಮಾಡಲು ಟಫ್ ಆಗಿದೆ. ಅವರ ರಾಜಕಾರಣ ಟಫ್ ಆಗಿದೆ. ಜನ ಅವರಿಗೆ ಟಫ್ ಆಗಿ ಉತ್ತರ ನೀಡುತ್ತಿದ್ದಾರೆ. ಅದಕ್ಕಾಗಿ ಈ ನಿರ್ಬಂಧ ಹೇರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದೇ ದಿನ ಮೂರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಸರಕಾರ ಹೇಳುತ್ತಿದೆ. ರಾಜ್ಯದಲ್ಲಿ 6 ಕೋಟಿ ಜನ ಇದ್ದಾರೆ. ಸೋಂಕಿತರ ಸಂಖ್ಯೆ 2 ರಿಂದ 3 ಸಾವಿರಕ್ಕೆ ಏರಿದೆ ಎಂದು ಹೇಳುತ್ತಿದ್ದಾರೆ. ಆ ಸೋಂಕಿತರು ಎಲ್ಲಿದ್ದಾರೆ ಎಂದು ಪಟ್ಟಿ ಕೊಟ್ಟರೆ ನಾವು ಹೋಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ. ಅವರು ರ್ಯಾಲಿ, ಪ್ರತಿಭಟನೆ ಮಾಡಬೇಡಿ ಎಂದಿದ್ದಾರೆ. ನಮ್ಮದು ನೀರಿಗಾಗಿ ನಡಿಗೆ. ವಾಕ್ ಫಾರ್ ದಿ ವಾಟರ್. ನಾವು ನೀರಿಗಾಗಿ ನಡೆಯುತ್ತೇವೆ ಅಷ್ಟೇ ಎಂದರು.

ಜನರ ಹಿತಕ್ಕಾಗಿ, ಕುಡಿಯುವ ನೀರಿಗೆ, ಜನರ ಭಾವನೆ, ಧ್ವನಿಗಾಗಿ, ರೈತರ ರಕ್ಷಣೆಗಾಗಿ ಬೆಂಗಳೂರಿನ ನಾಗರಿಕರಿಗಾಗಿ ನಾವು ಮನವಿ ಮಾಡುತ್ತಿದ್ದೇವೆ. ನಮ್ಮದು ಹೋರಾಟವಲ್ಲ ಮನವಿ. ಸರ್ಕಾರ ನಿರ್ಬಂಧ ಎಂದು ನೋಟೀಸ್ ಜಾರಿ ಮಾಡಿದ್ದಾರೆ. ನಾವು ರ್ಯಾಲಿ, ಧರಣಿ ಮಾಡುವುದಿಲ್ಲ. ನೀರಿಗಾಗಿ ನಡೆಯುತ್ತೇವೆ. ರಸ್ತೆಯಲ್ಲಿ ಯಾರೂ ನಡೆಯಬಾರದಾ? ಇಡೀ ರಾಜ್ಯದಲ್ಲಿ ರಸ್ತೆಯಲ್ಲಿ ಯಾರೂ ಓಡಾಡಬಾರದಾ? ಅದನ್ನು ತಡೆಯಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ನನಗೆ ಒಂದು ವಿಚಾರದಲ್ಲಿ ಬಹಳ ಸಂಕಟವಾಗುತ್ತಿದೆ. ಈಗಾಗಲೇ ಜನ ಸಂಕಷ್ಟಕ್ಕೆ ಸಿಕ್ಕಿದ್ದಾರೆ. ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು, ಕಾರ್ಮಿಕರು ಒದ್ದಾಡುತ್ತಿದ್ದಾರೆ. ಅವರ ಮೇಲೆ ಅನಗತ್ಯವಾಗಿ ಮತ್ತೆ ಲಾಕ್ ಡೌನ್ ಹೇರುವುದು ಎಷ್ಟರ ಮಟ್ಟಿಗೆ ಸರಿಯಲ್ಲ ಎಂದು ತಿಳಿಸಿದರು.

ಮೊದಲು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಿ

ಮಾರ್ಗಸೂಚಿ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ನನ್ನ ಬ್ರದರ್ ಸುಧಾಕರ್ ಅವರು ಮೊದಲ ಅಲೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡಿ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡಿದರಲ್ಲಾ ಅದಕ್ಕೆ ಸಂಬಂಧಿಸಿದಂತೆ ಮೊದಲು ಪ್ರಕರಣ ದಾಖಲಿಸಿಕೊಳ್ಳಲಿ. ಆಗಲೂ ಮಾರ್ಗಸೂಚಿ ಇತ್ತಲ್ಲವೇ? ಅವರ ಮಕ್ಕಳ ಮೇಲೆ ಹಾಕುವುದು ಬೇಡ. ಮಾರ್ಗಸೂಚಿ ಉಲ್ಲಂಘಿಸಿದ ಶ್ರೀರಾಮಲು, ಮದುವೆ, ಸಭೆ, ಸಮಾರಂಭಕ್ಕೆ ಹೋಗಿದ್ದ ಯಡಿಯೂರಪ್ಪನವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲೆ ಪ್ರಕರಣ ದಾಖಲಿಸಲಿ. ಜನಾಶೀರ್ವಾದ ಯಾತ್ರೆ ಮಾಡಿದ ಕೇಂದ್ರ ಬಿಜೆಪಿ ಮಂತ್ರಿಗಳ ಮೇಲೆ ಪ್ರಕರಣ ದಾಖಲಿಸಲಿ. ಅದನ್ನು ಬಿಟ್ಟು ನನಗೆ ವಾರೆಂಟ್ ಕಳುಹಿಸಿದ್ದಾರೆ,ʼ ಎಂದರು.

ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಪಾದಯಾತ್ರೆ ದಿನಾಂಕ ಬದಲಾವಣೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘ಯಾವ ಬದಲಾವಣೆಯೂ ಇಲ್ಲ. ಯಾರು ಹೇಳಿದ್ದು ಅದು ಪಾದಯಾತ್ರೆ ಅಂತಾ. ಅದು ನೀರಿಗಾಗಿ ನಡಿಗೆ ಅಷ್ಟೇ. ಈಗಾಗಲೇ ನಮ್ಮ ಶಾಸಕಾಂಗ ಪಕ್ಷದ ನಾಯಕರು, ಕಾರ್ಯಾಧ್ಯಕ್ಷರು, ಬೆಂಗಳೂರು ನಗರ ಪ್ರದೇಶದ ನಾಯಕರ ಜತೆ ಚರ್ಚೆ ಮಾಡುತ್ತೇನೆ. ನಾವು ಕೋವಿಡ್ ಮಾರ್ಗಸೂಚಿ ಅನುಸರಿಸುತ್ತೇವೆ. ನಿಯಮ ಪಾಲಿಸುತ್ತೇವೆ. 100 ಜನ ವೈದ್ಯರ ತಂಡ ಅದಕ್ಕೆ ಸಿದ್ಧವಿದೆ ಎಂದರು.

ಸರಕಾರ ವರ್ತಕರು, ವ್ಯಾಪಾರಸ್ಥರ ಮೇಲೆ ಗದಾಪ್ರಹಾರ ಮಾಡುತ್ತಿರುವುದನ್ನು ನೋಡಿ ಸಂಕಟವಾಗುತ್ತಿದೆ. ಅವರ ಬದುಕು ಏನಾಗಬೇಕು. ಎರಡು ವರ್ಷಗಳಿಂದ ಅವರು ಸಾಯುತ್ತಿದ್ದಾರೆ. ಇವರ ರಾಜಕೀಯಕ್ಕಾಗಿ, ನಮ್ಮ ಮೇಲಿನ ದ್ವೇಷಕ್ಕೆ, ವರ್ತಕರು, ವ್ಯಾಪಾರಸ್ಥರು, ಪ್ರವಾಸೋದ್ಯಮದವರು, ಬೀದಿ ವ್ಯಾಪಾರಿಗಳಿಗೆ ಬರೆ ಹಾಕುತ್ತಿದ್ದಾರೆ. ಸರ್ಕಾರ ಅವರನ್ನು ಹತ್ಯೆ ಮಾಡುತ್ತಿದೆ. ಮರ್ಡರ್ ಮಾಡುತ್ತಿದೆ. ಈ ಸರಕಾರಕ್ಕೆ ಜನ ಶಾಪ ಹಾಕುತ್ತಿದ್ದಾರೆ. ಅವರ ಶಾಪ ತಡೆದುಕೊಳ್ಳಲು ಇವರಿಗೆ ಸಾಧ್ಯವಿಲ್ಲ ಎಂದರು.

ನನ್ನ ಮೇಲೆ, ಶಾಸಕರ ಮೇಲೆ, ಪರಿಷತ್ ಸದಸ್ಯರ ಮೇಲೆ ವಿಪತ್ತು ನಿರ್ವಹಣೆ ಪ್ರಕರಣ ದಾಖಲಿಸಿದ್ದಾರೆ. ಇವರು ಮನುಷ್ಯರಾ? ಅವರ ಪಕ್ಷದ ನಾಯಕರು ಪ್ರತಿಭಟನೆ, ಮೆರವಣಿಗೆ ಮಾಡಿದರು. ನಿನ್ನೆ ಪ್ರಧಾನಿಗಳು ದೊಡ್ಡ ದೊಡ್ಡ ಸಮಾವೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಡಿ.ಕೆ. ಸುರೇಶ್ ಅವರು ಈಗ ನನ್ನನ್ನು ಭೇಟಿ ಮಾಡಿ, ರಾಮನಗರಕ್ಕೆ ನಡಿಗೆ ಮಾರ್ಗ ನೋಡಲು ಹೋಗುತ್ತಿದ್ದಾರೆ ಎಂದರು.

Tags: BJPCongress PartyCovid 19ಕರೋನ ಭೀತಿಕರೋನಾಕಾಂಗ್ರೆಸ್ಕೋವಿಡ್-19ಡಿಕೆ ಶಿವಕುಮಾರ್ನೀರಿಗಾಗಿ ನಡಿಗೆಬಿಜೆಪಿಮೇಕೆದಾಟುಮೇಕೆದಾಟು ಪಾದಯಾತ್ರೆಮೇಕೆದಾಟು ಯೋಜನೆಸಿದ್ದರಾಮಯ್ಯ
Previous Post

ಶಿವಮೊಗ್ಗದಿಂದ ತಮಿಳುನಾಡಿನ ಓಂ ಶಕ್ತಿ ದೇಗುಲಕ್ಕೆ ತೆರಳಿದ್ದ ಭಕ್ತರಿಂದ ಕೋವಿಡ್ ಭೀತಿ

Next Post

ರಾಜ್ಯದೆಲ್ಲೆಡೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ನಡೆಗೆ ಸಚಿವ ಕೆ.ಎಸ್ ಈಶ್ವರಪ್ಪ ಅಪಸ್ವರ

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

by ಪ್ರತಿಧ್ವನಿ
April 16, 2026
0

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ರಾಜ್ಯದೆಲ್ಲೆಡೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ನಡೆಗೆ ಸಚಿವ ಕೆ.ಎಸ್ ಈಶ್ವರಪ್ಪ ಅಪಸ್ವರ

ರಾಜ್ಯದೆಲ್ಲೆಡೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ನಡೆಗೆ ಸಚಿವ ಕೆ.ಎಸ್ ಈಶ್ವರಪ್ಪ ಅಪಸ್ವರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada