• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿವೇಶನಕ್ಕೆ ಕಪ್ಪು ಚುಕ್ಕೆಯ ವಿಫಲ ಯತ್ನ : ನಾಡದ್ರೋಹಿ ಎಂಇಎಸ್‌ ಪುಂಡರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
December 8, 2025
in Top Story, ಕರ್ನಾಟಕ, ರಾಜಕೀಯ
0
ಅಧಿವೇಶನಕ್ಕೆ ಕಪ್ಪು ಚುಕ್ಕೆಯ ವಿಫಲ ಯತ್ನ : ನಾಡದ್ರೋಹಿ ಎಂಇಎಸ್‌ ಪುಂಡರ ಬಂಧನ
Share on WhatsAppShare on FacebookShare on Telegram

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ(Winter session) ಸೆಡ್ಡು ಹೊಡೆದು ನಾಡದ್ರೋಹಿ ಎಂಇಎಸ್‌(MES) ಮಹಾಮೇಳಾವ್ ನಡೆಸುವ ಸಾಧ್ಯತೆ ಇದೆ.

ADVERTISEMENT
Siddaramaiah :  ಏನು ಎಂದು ಪ್ರಶ್ನಿಸಿದ್ದ HDK ವಿರುದ್ಧ ಸಿದ್ದು ಗರಂ #pratidhvani

ಅಧಿವೇಶನದ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವ ನಿಟ್ಟಿನಲ್ಲಿ ಪ್ರತಿ ವರ್ಷ ಅಧಿವೇಶನದ ವೇಳೆ ಎಂಇಎಸ್‌ ಈ ವಿಫಲ ಯತ್ನಕ್ಕೆ ಕೈ ಹಾಕುತ್ತಲೇ ಬಂದಿದೆ. ಅದೇ ರೀತಿ ಈ ಅಧಿವೇಶನದಲ್ಲಿಯೂ ಈ ದುಸ್ಸಾಹಸ್ಸಕ್ಕೆ ನಾಡದ್ರೋಹಿಗಳು ಮುಂದಾಗಿದ್ದಾರೆ. ಹೀಗಾಗಿ ಮಹಾರಾಷ್ಟ್ರದಿಂದ ನಗರಕ್ಕೆ ಆಗಮಿಸುತ್ತಿದ್ದ ಪುಂಡ ಶಿವಸೇನೆಯ ಮುಖಂಡರನ್ನು ಖಾನಾಪುರದಲ್ಲಿ ಬೆಳಗಾವಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ನಡೆದಿದೆ.

DK Suresh ದೆಹಲಿಯಲ್ಲಿ CM ಚೇಂಜ್ ಬಗ್ಗೆ ಏನ್ ಡಿಸ್ಕಷನ್ ಆಯ್ತು ಸರ್..?  #pratidhvani #bjp #jds #cmchairfight

ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಪುಂಡರಿಂದ ಮಹಾಮೇಳಾವ್‌ ನಡೆಸಲು ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪುಂಡಾಟ ಮೆರೆದು ಮಹಾಮೇಳಾವ್ ನಡೆಸಲು ಆಗಮಿಸುತ್ತಿದ್ದ ಮಹಾರಾಷ್ಟ್ರದ ಪುಂಡ ನಾಯಕರಿಗೆ ಪೊಲೀಸರು ಬಂಧಿಸಿ ಬಿಸಿ ಮುಟ್ಟಿಸಿದ್ದಾರೆ.  ನಾಡದ್ರೋಹಿಗಳ ಉಪಟಳ ಹಾಗೂ ರಾಜ್ಯ ವಿರೋಧಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸರು ಗಡಿಭಾಗದಲ್ಲಿ ಮೊದಲೇ ಬಂದೋಬಸ್ತ್ ಮಾಡಿಕೊಂಡಿದ್ದರು.

Pradeep Eshwar  ಪ್ರದೀಪ್  ಈಶ್ವರ್  ಮಾತಿಗೆ ಹಾಸನ ಜನರು ಫುಲ್  ಫಿದಾ  ! #siddaramaiah #dkshivakumar #hassan

ಇತ್ತ ಬೆಳಗಾವಿ ನಗರದ ಸಂಭಾಜಿ ವೃತ್ತದಲ್ಲಿ ನೂರಕ್ಕೂ ಅಧಿಕ ಪೊಲೀಸರಿಂದ ಭದ್ರತೆ ಮಾಡಲಾಗಿದೆ. ಒಂದು ವೇಳೆ ಜಿಲ್ಲಾಡಳಿತ ಕಣ್ತಿಪ್ಪಿಸಿ ಎಂಇಎಸ್ ಪುಂಡರು ನಗರಕ್ಕೆ ಬಂದರೆ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆಯಲ್ಲಿದ್ದು, ನಾಲ್ಕು ಕಡೆಗಳಲ್ಲಿ ಪೊಲೀಸರು ಭಾರೀ ಬಂದೋಬಸ್ತ್ ಮಾಡಿಕೊಂಡಿದ್ದರು. ಬೆಳಗಾವಿ ಖಡೇಬಜಾರ್, ಕ್ಯಾಂಪ್, ಟಿಳಕವಾಡಿ, ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂದೋಬಸ್ತ್ ಮಾಡಲಾಗಿದೆ. ಬೆಳಗಾವಿ, ನಿಪ್ಪಾಣಿ ಗಡಿಯಲ್ಲಿ ಬೀಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

Lakshmi Hebbalkar on Session: ನಾಳೆಯಿಂದ ಬೆಳಗಾವಿ ಅಧಿವೇಶನ.. ಬಿಜೆಪಿ ಹೋರಾಟಕ್ಕೆ ಸಿಟ್ಟಾದ ಹೆಬ್ಬಾಳ್ಕರ್

ಅಲ್ಲದೇ ಎಂಇಎಸ್‌ ಸಂಘಟನೆಯನ್ನು ರಾಜ್ಯದಲ್ಲಿ ಸಂಪೂರ್ಣ ನಿಷೇಧ ಮಾಡಬೇಕೆಂಬ ಬೇಡಿಕೆ ಹಲವು ದಿನಗಳಿಂದ ಇದ್ದರೂ ಇದುವರೆಗೂ ಯಾವುದೇ ಸರ್ಕಾರಕ್ಕೂ ಸಾಧ್ಯವಾಗಿಲ್ಲ. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕನ್ನಡಪರ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಲೇ ಇವೆ ಎನ್ನುವುದು ಗಮನಾರ್ಹ ಸಂಗತಿಯಾಗಿದೆ.

Tags: BelagaviBJPcongressKaranatakaPoliticsWinter session
Previous Post

ಇಂದಿನಿಂದ ಚಳಿಗಾಲ ಅಧಿವೇಶನ: ಸದನ-ಕದನಕ್ಕೆ ಸಜ್ಜಾದ ಕುಂದಾನಗರಿ

Next Post

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ!

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada