ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಬಿಜೆಪಿ ಕೂಡ ಹೊಸ ಹೊಸ ದಾಳ ಹಾಕುತ್ತಿದ್ದೆ, ಅಭಿವೃದ್ಧಿ ಕಾಣುತ್ತಿರುವ ಮೆಟ್ರೋ ಬಾಲ ಹಿಡಿದು ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಮುಂದಾಗಿರುವಂತೆ ಕಾಣುತ್ತಿದೆ ಇದಕ್ಕೆ ಪುಷ್ಟಿ ಕೊಡುವಂತೆ, ಪ್ರಧಾನಿ ಮೋದಿ ಅವರು, ಉತ್ತರ ಪ್ರದೇಶದಂತೆ ಕರ್ನಾಟಕದಲ್ಲೂ ಮೆಟ್ರೋ ವಿಸ್ತರಣೆ ಮಾಡುತ್ತೇವೆ. ಬೆಂಗಳೂರು ಅಲ್ಲದೇ ಮೈಸೂರಿನಲ್ಲೂ ಮೆಟ್ರೋ ಸಾರಿಗೆ ಆರಂಭಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕ್ಷಿಪ್ರ ಸಾರಿಗೆ ವ್ಯವಸ್ಥೆ ಕಾರಿಡಾರ್ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಮಾಲಿನ್ಯ ನಿಯಂತ್ರಣಕ್ಕಾಗಿ 1200 ಎಲೆಕ್ಟ್ರಿಕ್ ಬಸ್‍ಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ 500 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೆಟ್ರೋದಲ್ಲಿ ನಿತ್ಯ 80 ಲಕ್ಷಕ್ಕೂ ಅಧಿಕ ಜನರು ಪ್ರಯಾಣ ಮಾಡುತ್ತಿದ್ದಾರೆ. ನನ್ನ ಬಾಲ್ಯವನ್ನು ರೈಲ್ವೆ ಪ್ಲಾಟ್ ಫಾರಂನಲ್ಲೇ ಕಳೆದೆ, ಇಂದು ರೈಲ್ವೆ ವ್ಯವಸ್ಥೆಯಲ್ಲಿನ ಬದಲಾವಣೆ ಹೆಚ್ಚು ಖುಷಿ ಕೊಟ್ಟಿದೆ. ರೈಲ್ವೆಯಲ್ಲಿ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗಿದೆ. ಇದು ನಾರಿ ಶಕ್ತಿ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಹೇಳಿದ್ದಾರೆ.












