
ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ವೇರ್ನಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ವಿಶ್ವದ ಹಲವು ವಿಮಾನಗಳ ಸೇವೆಯಲ್ಲಿ ವಿಳಂಬ ಹಾಗೂ ಭಾರೀ ವ್ಯತ್ಯಯ ಉಂಟಾಗಿದೆ. ದೆಹಲಿ, ನ್ಯೂಯಾರ್ಕ್ ಸೇರಿ ಹಲವೆಡೆ ವಿಮಾನ ಸಂಚಾರ ಸ್ಥಗಿತ ಮಾಡಲಾಗಿದೆ.ಮೈಕ್ರೋಸಾಫ್ಟ್ ಸರ್ವರ್‌ನಲ್ಲಿ ವ್ಯತ್ಯಯವಾದ ಪರಿಣಾಮ ಜಾಗತಿಕ ಮಟ್ಟದಲ್ಲಿ ಬಹಳಷ್ಟು ತೊಂದರೆಯಾಗಿದೆ. ವಿಶ್ವದಾದ್ಯಂತ ವಿಮಾನ ಸಂಚಾರ, ಸೇವೆಯಲ್ಲಿ ವ್ಯತ್ಯಯವಾಗಿದ್ರೆ ಲಂಡನ್ ಸ್ಟಾಕ್ ಎಕ್ಸ್‌ಚೇಂಚ್ ಸೇವೆ ಕೂಡ ಸ್ಥಗಿತವಾಗಿದೆ.

ಮೈಕ್ರೋಸಾಫ್ಟ್‌ನ ಕ್ಲೌಡ್ ಸರ್ವೀಸ್‌ನಲ್ಲಿ ತಾಂತ್ರಿಕ ತೊಂದರೆ ಎದುರಾಗಿದೆ. ಇದರಿಂದಾಗಿ ಬರ್ಲಿನ್, ದೆಹಲಿ, ನ್ಯೂಯಾರ್ಕ್ ಸೇರಿದಂತೆ ವಿಶ್ವದೆಲ್ಲೆಡೆ ವಿಮಾನ ಸಂಚಾರ ಸ್ಥಗಿತವಾಗಿದೆ. ಭಾರತದಲ್ಲೂ ವಿಮಾನ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ರವಾನೆ ಮಾಡಲಾಗಿದೆ.ಮೈಕ್ರೋಸಾಫ್ಟ್ ಸರ್ವೀಸ್‌ನಲ್ಲಿ ವ್ಯತ್ಯಯವಾದ ಪರಿಣಾಮ ಅಮೆರಿಕಾದ ಎಲ್ಲಾ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಭಾರತದ ಇಂಡಿಗೋ, ಸ್ಪೈಸ್ ಜೆಟ್, ಏರ್ ಇಂಡಿಯಾ ವಿಮಾನ ಸಂಚಾರಕ್ಕೂ ಅಡಚಣೆಯಾಗಿದೆ.