ರಾಮನಗರ: ದಲಿತ ಮುಖಂಡರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ್ ಜಾಗ ಖಾಲಿ ಮಾಡಿರುವ ಘಟನೆ ಇಂದು ಜರುಗಿದೆ.
ರಾಮನಗರ ಜಿಲ್ಲೆಯ ಹಾರೋಹಳ್ಳಿ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ನೂತನ ತಾಲೂಕು ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಸಚಿವ ಅಶ್ವತ್ಥ ನಾರಾಯಣ್’ಗೆ ದಲಿತರು ಮುಖಂಡರು ಪ್ರಶ್ನೆ ಮಾಡಿದ್ದಾರೆ.
ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಕಳೆದ ಹಲವು ದಿನಗಳಿಂದ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಪಕ್ಷಕ್ಕೆ ದಲಿತರ ಮೇಲೆ ಪ್ರೀತಿ ಇದ್ದರೆ ಮೊದಲು ಸಮಸ್ಯೆ ಬಗೆಹರಿಸಿ ಎಂದು ಒತ್ತಾಯಿಸಿದರು.
ಹಾರೋಹಳ್ಳಿ ರಚನೆ ಆಗಿದೆ ಅಭಿವೃದ್ದಿಗೆ ಎಷ್ಟು ಕೋಟಿ ಮೀಸಲಿಟ್ಟಿದ್ದೀರಿ ಮೊದಲು ಹೇಳಿ ಸಚಿವ ಅಶ್ವಥ್ ನಾರಾಯಣಗೆ ದಲಿತ ಸಂಘಟನೆ ಮುಖಂಡರು ಪ್ರಶ್ನೆ ಮಾಡಿದ್ದು, ಈ ವೇಳೆ ಸಚಿವರು ಕಾರ್ಯಕ್ರಮದಿಂದ ಹೊರನಡೆದಿದ್ದಾರೆ.












