ಕರ್ನಾಟಕದಲ್ಲಿ ಸಿರಿಧಾನ್ಯ ಬೆಳೆಯಲು ರೈತರನ್ನು ಉತ್ತೇಜಿಸುವುದಕ್ಕಾಗಿ ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲಿ ಶನಿವಾರ ಆಯೋಜಿಸಿದ ಸಿರಿಧಾನ್ಯಗಳ ಅಭಿಯಾನ ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಬಿಸಿಪಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ಸಿರಿಧಾನ್ಯಗಳ ಮೇಳ ಆಯೋಜಿಸಲಾಗುವುದು ಎಂದಿದ್ದಾರೆ.
ರಾಜ್ಯದಿಂದ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾನಿ ಜಂಟಿ ಸಮೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಸಮೀಕ್ಷೆಯ ವರದಿ ಬಂದ ನಂತರ ಪರಿಹಾರ ಒದಗಿಸಲಾಗುವುದು ಎಂದು ಹೇಳಿದ್ದಾರೆ.