• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಡಿ.ಸುಧಾಕರ್‌ ವಜಾ ಮಾಡಿ ಬಂಧಿಸಬೇಕು: ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

Any Mind by Any Mind
September 12, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಚ್‌.ಡಿ.ಕುಮಾರಸ್ವಾಮಿ

ಎಚ್‌.ಡಿ.ಕುಮಾರಸ್ವಾಮಿ

Share on WhatsAppShare on FacebookShare on Telegram

ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ADVERTISEMENT

ನಗರದಲ್ಲಿ ಮಂಗಳವಾರ (ಸೆಪ್ಟೆಂಬರ್ 12) ಮಾಧ್ಯಮಗಳ ಜತೆ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು ಎಂದರು.

ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತಾ ಇರ್ತೀರಲ್ಲ, ಅಲ್ಲವೇ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಎಚ್‌.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ಐಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದರಲ್ಲ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ.. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮಚ್ವು , ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲಾ, ದಲಿತರ ಪರ ಕಾಳಜಿ ಇರುವ ವಿಧೇಯಕವನ್ನು ಬೇರೆ ಬೇರೆ ಸದನದಲ್ಲಿ ಪಾಸ್ ಮಾಡಿಕೊಂಡಿದ್ದೀರಲ್ಲ, ಕಸದ ಬುಟ್ಟಿಗೆ ಹಾಕಲಿಕ್ಕೆ ಆ ಬಿಲ್ ಅನ್ನು ಪಾಸ್ ಮಾಡಿಕೊಂಡಿದ್ದೀರಾ? ತಕ್ಷಣ ನಿಮ್ಮ ಮಂತ್ರಿಯನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು ಎಂದು ಒತ್ತಾಯ ಮಾಡಿದರು.

ನಾವು ಟೀಕೆ ಮಾಡಿದರೆ ಅಸೂಯೆ ಅಂತಾರೆ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೆನಾ ನೀವು ದಲಿತರನ್ನು ಉದ್ದಾರ ಮಾಡುವುದು ಎಂದ ಅವರು; ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

ದಲಿತ ಸಂಘಟನೆಗಳಿಗೂ ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಅವರು ಈ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಇರಬಾರದು. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು ಎಂದರು.

Tags: CM SiddaramaiahD SudhakarHD Kumaraswamyಎಚ್‌.ಡಿ.ಕುಮಾರಸ್ವಾಮಿಡಿ.ಸುಧಾಕರ್‌ಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ʼಜಲಪಾತʼ ಸಿನಿಮಾದ ಲವ್ ಸಾಂಗ್ ಲಾಂಚ್ ಮಾಡಿದ ಜಯಮಾಲ

Next Post

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..
Top Story

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

by ಪ್ರತಿಧ್ವನಿ
March 11, 2026
0

ಬೆಂಗಳೂರು : ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ (AI) ಮತ್ತು...

Read moreDetails
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮ ಲೆಕ್ಕಿಗರು ಪಂಚಾಯ್ತಿಗಳಲ್ಲೇ ಕುಳಿತು ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada