
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಹೈಕೋರ್ಟ್ ಆದೇಶದಂತೆ ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮಾಡಿದೆ.ರಾಜ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂಬ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ಆರೋಪ ಮಾಡಿದ್ದಾರೆ.

ಟ್ವಿಟ್ಟರ್ ಮೂಲಕ ಸಚಿವ ದಿನೇಶ್ ಗುಂಡೂರಾವ್ ಅವರು ಹೈಕೋರ್ಟ್ ಆದೇಶದಂತೆ ಬಿಡದಿಯ ಕೇತಗಾನಹಳ್ಳಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಆದರೆ HDK ಇದು ಸರ್ಕಾರದ ಷಡ್ಯಂತ್ರ ಎಂದಿದ್ದಾರೆ. ಹೈಕೋರ್ಟ್ ಸ್ಪಷ್ಟ ನುಡಿಗಳಲ್ಲಿ ತೆರವು ಮಾಡಬೇಕು ಎಂದು ಕಂದಾಯ ಅಧಿಕಾರಿಗಳಿಗೆ ಸೂಚಿಸಿರುವಾಗ, ಅಧಿಕಾರಿಗಳು ನ್ಯಾಯಾಲಯದ ಆದೇಶ ಪಾಲಿಸಲೇಬೇಕು. ಇದರಲ್ಲಿ ಸರ್ಕಾರ ಷಡ್ಯಂತ್ರ ಮಾಡುವುದು ಏನಿದೆ.?

ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವುದು HDK. ಆ ಒತ್ತುವರಿಯನ್ನು ತೆರವುಗೊಳಿಸುವಂತೆ ಆದೇಶ ಕೊಟ್ಟಿರುವುದು ಉಚ್ಛ ನ್ಯಾಯಾಲಯ. HDKಯವರು ಈಗ ನಮ್ಮ ಮೇಲೆ ಗೂಬೆ ಕೂರಿಸುವ ಬದಲು ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬಹುದಿತ್ತಲ್ಲವೆ.? ಸರ್ಕಾರಿ ಜಾಗ ಕಬಳಿಸಿ ಈಗ ಅನುಕಂಪ ಗಿಟ್ಟಿಸಲು ಯತ್ನಿಸುವುದು ನಾಟಕವಲ್ಲವೆ.? ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಮ್ಮ ಎಕ್ಷ್ (ಟ್ವಿಟ್ಟರ್ ) ಖಾತೆಯಲ್ಲಿ ಬರೆದುಕೊಂಡಿದ್ದಾರೆ.