ಬೆಂಗಳೂರು : ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರವನ್ನು ಕುಟುಕುತ್ತಲೇ ಇದ್ದಾರೆ. ಈ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಭಾರತೀಯರಿಗೆ ಸಂವಿಧಾನವೇ ಬೈಬಲ್, ಭಗವದ್ಗೀತೆಹಾಗೂ ಕುರಾನ್ ಇದ್ದಂತೆ ಎಂದು ಹೇಳಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯನ್ನು ಕಲಂ 25ರ ವಿರುದ್ಧವಾಗಿ ಜಾರಿಗೆ ತರಲಾಗಿತ್ತು. ನಾವು ಅಂದೇ ಈ ಬಗ್ಗೆ ಧ್ವನಿ ಎತ್ತಿದ್ದೆವು. ಇದೀಗ ಸಂವಿಧಾನದ ನಿಯಮಗಳ ಪ್ರಕಾರವೇ ಈ ಕಾಯ್ದೆಯನ್ನು ಹಿಂಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರಕ್ಕೆ ಸಂವಿಧಾನದ ಮೇಲೆ ಗೌರವ ಹಾಗೂ ನಂಬಿಕೆಯಿದೆ ಎಂದು ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಅನ್ನ ಭಾಗ್ಯ ವಿಚಾರದಲ್ಲಿ ಕೇಂದ್ರ ಸರ್ಕಾರದ ರಾಜಕೀಯ ವಿಚಾರವಾಗಿಯೂ ಮಾತನಾಡಿದ ಅವರು, ನಾವು ಬಿಜೆಪಿಯನ್ನು ನಂಬಿಕೊಂಡು ಅಧಿಕಾರ ಮಾಡ್ತಿಲ್ಲ. ಶೀಘ್ರದಲ್ಲಿಯೇ ಎಲ್ಲಾ ಗ್ಯಾರಂಟಿ ಯೋಜನೆಗಳು ಜಾರಿಗೆ ಬರುತ್ತವೆ ಎಂದಿದ್ದಾರೆ.