ಕೊಡಗು ಜಿಲ್ಲೆಯ ನಾಲ್ಕು ಭಾಗಗಳಲ್ಲಿ 66 ಕೆ.ವಿ.ಸಾಮರ್ಥ್ಯ ದ ವಿದ್ಯುತ್ ಉಪಕೇಂದ್ರ ಹಾಗೂ ಎರಡು ಭಾಗಗಳಲ್ಲಿ 33 ಕೆ.ವಿ. ಸಾಮರ್ಥ್ಯದ ವಿದ್ಯುತ್ ಉಪಕೇಂದ್ರ ಸ್ಥಾಪನೆ ಕಾಮಗಾರಿ ಕೈಗೊಳ್ಳಲು ಹದಿನೈದು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಇಂಧನ ಸಚಿವ ಕೆ.ಜೆ ಜಾರ್ಜ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರ ಕೋರಿಕೆ ಮೇರೆಗೆ ಗುರುವಾರ ಇಂಧನ ಸಚಿವರ ಗೃಹ ಕಛೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಚಿವ ಜಾರ್ಜ್ ರವರು ಹುದಿಕೇರಿ ,ಬಾಳಲೆ,ಮೂರ್ನಾಡು ,ಸಿದ್ದಾಪುರ ಗಳಲ್ಲಿ 66 ಕೆ.ವಿ.ಸಾಮರ್ಥ್ಯದ ವಿದ್ಯುತ್ ಉಪಕೇಂದ್ರಗಳುಹಾಗೂ ಸಂಪಾಜೆ,ಭಾಗಮಂಡಲ ಗಳಲ್ಲಿ 33 ಕೆ.ವಿ. ಸಾಮರ್ಥ್ಯದ ವಿದ್ಯುತ್ ಉಪಕೇಂದ್ರಕ್ಕೆ ಸಂಭಂದಿಸಿದ ಕಾಮಗಾರಿಗೆ ಮುಂದಿನ ಹದಿನೈದು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವರ ಗೃಹ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜಾ ಉತ್ತಪ್ಪ ಸೇರಿದಂತೆ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.