ಅಂಗರಕ್ಷಕನಿಂದ ಸಚಿವ ಹೆಚ್ ಸಿ ಮಹದೇವಪ್ಪ ಅವರು ಶೂ ಹಾಕಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತ ಸಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಚಿವ ಮಹದೇವಪ್ಪನವರು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, ನಂಜನಗೂಡು ಉಪ ಚುನಾವಣೆಯಲ್ಲಿ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಎತ್ತದಂತಾಗಿತ್ತು. ಅಂದಿನಿಂದ ಈ ಸಮಸ್ಯೆ ಇದೆ. ಕುಳಿತರೆ ಬೇಗ ಏಳಲು ಆಗೋದಿಲ್ಲ. ಬಗ್ಗಲು ಕೂಡ ಸಾಧ್ಯವಾಗೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮುಂದುವರೆದು, ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತೆ ಎಂದು ಹೇಳಿದ್ದಾರೆ.

ಅಂಗರಕ್ಷಕನಿಂದ ಶೂ ತೊಡಿಸಿಕೊಂಡ ಸಚಿವ ಮಹದೇವಪ್ಪ
ಧಾರವಾಡ ನಗರದ ಸಪ್ತಾಪುರದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಮಹದೇವಪ್ಪ ಊಟದ ವ್ಯವಸ್ಥೆ ಸೇರಿ ಹಾಸ್ಟೆಲ್ನ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಡುಗೆ ಮನೆಗೆ ತೆರಳಿ ವಾಪಸ್ ಆದ ಸಚಿವ ಮಹದೇವಪ್ಪ ಅವರು ಅಂಗರಕ್ಷಕನ ಕೈಯಿಂದ ಶೂ ಹಾಕಿಸಿಕೊಂಡ ಘಟನೆ ನಡೆಯಿತು. ಇದು ವಿವಾದಕ್ಕೆ ಕಾರಣವಾಗಿದೆ.
ಮಂತ್ರಿ ಹೆಚ್ ಸಿ ಮಹದೇವಪ್ಪ ಕೂಡಲೆ ಕ್ಷಮೆ ಯಾಚಿಸಬೇಕು : ಎಎಪಿ ಆಗ್ರಹ
ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ತಮ್ಮ ಗನ್ ಮ್ಯಾನ್ ನಿಂದ ಶೂ ಹಾಕಿಸಿಕೊಳ್ಳುತ್ತಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.










