• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

ಈಶ್ವರ ಖಂಡ್ರೆ ವೀರಶೈವ ಮಹಾಸಭಾದ 24ನೇ ರಾಷ್ಟ್ರೀಯ ಅಧ್ಯಕ್ಷ

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!
Share on WhatsAppShare on FacebookShare on Telegram

ಬೆಂಗಳೂರಿನ ಮಹಾಸಭಾದ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನೆರೆದಿದ್ದ  ಪ್ರಭಾಕರ ಕೋರೆ, ಅಣಬೇರು ರಾಜಣ್ಣ, ಚರಂತಿಮಠ ಮುಂತಾದ ಪ್ರಮುಖ ನಾಯಕರು ಉಪಸ್ಥಿತಿಯಲ್ಲಿ  ಈಶ್ವರ್ ಖಂಡ್ರೆಯವರನ್ನು ಅವಿರೋಧವಾಗಿ ಆಯ್ಕೆಮಾಡಿದರು.

ADVERTISEMENT

ದಿವಂಗತ ಶಾಮನೂರು ಶಿವಶಂಕರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ಈಶ್ವರ್ ಖಂಡ್ರೆ ಹಿರಿಯ ಉಪಾಧ್ಯಕ್ಷರಾಗಿದ್ದರು. ಶಾಮನೂರು ಅವರು ಲಿಂಗೈಕ್ಯರಾದ ನಂತರ ತೆರವಾದ ಸ್ಥಾನಕ್ಕೆ ಈಗ ಅವರಿಗೆ ಭಡ್ತಿ ಸಿಕ್ಕಂತಾಗಿದೆ. ಕೆಲವು ವೈದಿಕ ಮಾಧ್ಯಮಗಳು ಹೊಸ ಅಧ್ಯಕ್ಷರ ಆಯ್ಕೆಗೆ ಚುನಾವಣೆಯ ನಡೆಯಲಿದೆ ಎಂದು ವರದಿ ಮಾಡಿದ್ದವು. ಈಶ್ವರ್ ಖಂಡ್ರೆ, ಕೋರೆಯವರ ಜೊತೆ ಯಡಿಯೂರಪ್ಪ, ಸುತ್ತೂರು ಸ್ವಾಮೀಜಿ, ಕೊನೆಗೆ ದಿಂಗಾಲೇಶ್ವರ ಸ್ವಾಮೀಜಿಯ ಹೆಸರನ್ನೂ ಸೂಚಿಸಿದ್ದರು.

ಆದರೆ ಸ್ಪರ್ಧೆಯ ಮುಂಚೂಣಿಯಲ್ಲಿರುವ ಸಚಿವ ಈಶ್ವರ ಖಂಡ್ರೆ ಹಾಗೂ ಪ್ರಬಲ ಸ್ಪರ್ಧಿಯೆಂದು ಬಿಂಬಿತವಾಗಿರುವ ಉದ್ಯಮಿ ಪ್ರಭಾಕರ ಕೋರೆ ಒಮ್ಮತದ ಅಭ್ಯರ್ಥಿಯ ಆಯ್ಕೆಗೆ ಕರೆ ಕೊಟ್ಟಿದ್ದರು. ಆಯ್ಕೆಯ ನಂತರ ಸುದ್ದಿಗೋಷ್ಠಿ ನಡೆಸಿದ ಈಶ್ವರ್ ಖಂಡ್ರೆ ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದರು. ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಸಮಾಜದ ಎಲ್ಲಾ ಒಳ ಪಂಗಡಗಳನ್ನು ಒಗ್ಗೂಡಿಸಲು ತಾವು ಶ್ರಮಿಸುವುದಾಗಿ ತಿಳಿಸಿದರು.

ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನರು ತೀವ್ರ ಹಿಂದುಳಿದಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು. ಹೀಗಾಗಿ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಲು ಸಭಾ ವತಿಯಿಂದ ನೂತನ ಅಧ್ಯಕ್ಷನಾಗಿ ಶ್ರಮಿಸುವುದಾಗಿ ಹೇಳಿದರು.

ಬೆಂಗಳೂರಿನಲ್ಲಿ ಹಾಸ್ಟೆಲ್
ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಿ, ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಸಂಕಲ್ಪ ಮಾಡಿರುವುದಾಗಿ ತಿಳಿಸಿದರು. ಈಗಾಗಲೇ ಹಲವು ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಇದ್ದು, ಭವನ ಇಲ್ಲದ ಜಿಲ್ಲೆಗಳಲ್ಲಿ ಭವನ ನಿರ್ಮಾಣ ಮಾಡಲೂ ಶ್ರಮಿಸುವುದಾಗಿ, ಈ ಭವನದಲ್ಲಿ ಸಮುದಾಯದ ಪ್ರತಿಭಾವಂತರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುವುದು ಎಂದರು. ತಮ್ಮ ಸಮಾಜಕ್ಕೆ ತನ್ನದೇ ಆದ ಸುದೀರ್ಘ ಇತಿಹಾಸ ಇದೆ, ಭವ್ಯತೆ ಇದೆ, ಶ್ರೇಷ್ಠತೆಯೂ ಇದೆ. ಮಾನವ ಧರ್ಮಕ್ಕೆ ಜಯವಾಗಲೀ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ನಮ್ಮ ಹಿರಿಯರು ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ್ದಾರೆ.

1904ರಲ್ಲಿ ಹಾನಗಲ್ ಕುಮಾರೇಶ್ವರ ಮಹಾಸ್ವಾಮೀಜಿ ಶುರು ಮಾಡಿದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರುಗಳಾಗಿ ಸಿರಸಂಗಿ ಲಿಂಗರಾಜದೇಸಾಯರು, ರಾಜಾ ಲಖಮನಗೌಡರು, ಫ.ಗು. ಹಳಕಟ್ಟಿಯವರು, ಬಂಥನಾಳ ಸಂಗನ ಬಸವ ಸ್ವಾಮಿಗಳು, ಡಾ. ಶಿವಕುಮಾರ ಮಹಾಸ್ವಾಮೀಜಿ, ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ ಮೊದಲಾದವರು ಸೇವೆ ಸಲ್ಲಿಸಿದ್ದಾರೆ. ಈ ಸ್ಥಾನದಲ್ಲಿ ಕಾರ್ಯ ನಿರ್ವಹಿಸುವ ಅವಕಾಶ ದೊರೆತಿರುವುದು ತಮ್ಮ ಸೌಭಾಗ್ಯ ಎಂದರು.

ಸುದ್ದಿಗೋಷ್ಠಿಯಲ್ಲಿ ಗಣೇಶ್ ಶಾಮನೂರು, ಪ್ರಭಾಕರ ಕೋರೆ, ರಾಜಣ್ಣ, ವೀರಣ್ಣ ಚರಂತಿ ಮಠ, ಮಹಾರಾಷ್ಟ್ರ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಘಟಕದ ಅಧ್ಯಕ್ಷರು, ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Tags: BJPBY YediyurappaEshwar KhandreJDSKarntakaKeralaMaharastraMinister Eshwar KhandrePrabhakar KhoreRajannashamanur shivashankarappaTamilnaduVeeranna Charanti
Previous Post

ಬೆಂಗಳೂರಿನಲ್ಲಿ ಇಂದಿನಿಂದ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ ಆರಂಭ

Next Post

ಫಿಟ್ನೆಸ್ ತರಬೇತುದಾರೆಗೆ ಲೈಂಗಿಕ ಕಿರುಕುಳ- ಕಿಡಿಗೇಡಿ ಬಂಧನ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಫಿಟ್ನೆಸ್ ತರಬೇತುದಾರೆಗೆ ಲೈಂಗಿಕ ಕಿರುಕುಳ- ಕಿಡಿಗೇಡಿ ಬಂಧನ

ಫಿಟ್ನೆಸ್ ತರಬೇತುದಾರೆಗೆ ಲೈಂಗಿಕ ಕಿರುಕುಳ- ಕಿಡಿಗೇಡಿ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada