• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ರಿಮ್ಸ್‌ಗೆ ಸಚಿವ ಈಶ್ವರ ಖಂಡ್ರೆ ಭೇಟಿ; ಡೆಂಗಿ ನಿಯಂತ್ರಿಸಲು ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇದೀಗ, ರಾಜಕೀಯ, ವಿಶೇಷ
0
ಬ್ರಿಮ್ಸ್‌ಗೆ ಸಚಿವ ಈಶ್ವರ ಖಂಡ್ರೆ ಭೇಟಿ; ಡೆಂಗಿ ನಿಯಂತ್ರಿಸಲು ಸೂಚನೆ
Share on WhatsAppShare on FacebookShare on Telegram

ಬೀದರ್: ‘ಡೆಂಗಿ ಪ್ರಕರಣಗಳು ಹೆಚ್ಚಾಗದಂತೆ ನಿಯಂತ್ರಿಸಬೇಕು. ದಿನಕ್ಕೆ ಕನಿಷ್ಠ 500ರಿಂದ 600 ಜನರನ್ನು ಪರೀಕ್ಷೆಗೆ ಒಳಪಡಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಬ್ರಿಮ್ಸ್‌) ಬುಧವಾರ ಸಂಜೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಬ್ರಿಮ್ಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ನಿರ್ದೇಶನ ನೀಡಿದರು.

ADVERTISEMENT

ತಾಲ್ಲೂಕು ಕೇಂದ್ರಗಳ ಖಾಸಗಿ ಆಸ್ಪತ್ರೆಯಲ್ಲಿ ಡೆಂಗಿಗೆ ಚಿಕಿತ್ಸೆ ಪಡೆಯುತ್ತಿದ್ದರೆ ಅಂತಹವರ ಮಾಹಿತಿ ಸಂಗ್ರಹಿಸಬೇಕು. ಡೆಂಗಿ ಹರಡದಂತೆ ಎಚ್ಚರಿಕೆ ವಹಿಸಬೇಕು. ಗಪ್ಪಿ ಮೀನುಗಳ ಕೊರತೆ ಆಗದಂತೆ ನಿಗಾ ವಹಿಸಿ, ನೀರು ನಿಂತಿರುವ ಸ್ಥಳಗಳಲ್ಲಿ ಮೀನುಗಳನ್ನು ಬಿಡಬೇಕೆಂದು ಸೂಚಿಸಿದರು.ಜನವಸತಿ ಪ್ರದೇಶಗಳಲ್ಲಿ, ನೀರು ನಿಲ್ಲುವ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕು. ಕಂದಾಯ, ಪಂಚಾಯತ್ ರಾಜ್, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಎಲ್ಲ ಗ್ರಾಮಿಣ, ನಗರ ಪ್ರದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಕೆಳಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಪಂ ಸಿಇಒ ಡಾ. ಗಿರೀಶ್‌ ಬದೋಲೆ ಅವರಿಗೆ ನಿರ್ದೇಶನ ಕೊಟ್ಟರು.

ಡೆಂಗಿಯಿಂದ ಯಾವುದೇ ಸಾವುನೋವುಗಳು ಆಗಬಾರದು. ಶೀಘ್ರ ಜಿಲ್ಲೆ ಡೆಂಗಿ ಮುಕ್ತ ಅಂತ ಘೋಷಿಸಬೇಕು. ನಗರಸಭೆ ಪೌರಾಯುಕ್ತರು ನಗರದಲ್ಲಿ ಪ್ರದಕ್ಷಿಣೆ ಹಾಕಿ ಪರಿಶೀಲಿಸಬೇಕೆಂದು ಶಿವರಾಜ್‌ ರಾಠೋಡ್‌ ಅವರಿಗೆ ಸೂಚಿಸಿದರು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಗರದ ಅಂದಗೆಡಿಸುವ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಬೇಕು. ಮಾತಿಗೆ ಬಗ್ಗದಿದ್ದರೆ ಪರವಾನಗಿ ರದ್ದು ಪಡಿಸಲು ನೋಟಿಸ್ ಕೊಡಬೇಕು. ಕರಪತ್ರ ಹಂಚಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಉಪವಿಭಾಗಾಧಿಕಾರಿ ಎಲ್ಲ ತಾಲ್ಲೂಕುಗಳಿಗೆ ಭೇಟಿ ಕೊಡಬೇಕೆಂದು ಲವೀಶ್‌ ಒರ್ಡಿಯಾ ಅವರಿಗೆ ಸೂಚಿಸಿದರು.ಪೌರಾಡಳಿತ ಸಚಿವ ರಹೀಂ ಖಾನ್‌, ಡಿಎಚ್‌ಒ ಡಾ. ಧ್ಯಾನೇಶ್ವರ ನೀರಗುಡಿ, ಶಸ್ತ್ರ ಚಿಕಿತ್ಸಕ ಡಾ. ಮಹೇಶ ಬಿರಾದಾರ ಮತ್ತಿತರರು ಹಾಜರಿದ್ದರು.ಅಶುದ್ಧ ನೀರಿನಿಂದ ಏನಾದ್ರೂ ಆದ್ರೆ ತಲೆದಂಡ”ಶುದ್ಧ‌ ಕುಡಿಯುವ ನೀರು ಪೂರೈಸಬೇಕು. ಯಾರಾದರೂ ಅಶುದ್ಧ ನೀರು ಕುಡಿದು ಏನಾದ್ರೂ ಆದ್ರೆ ನಿಮ್ಮ ತಲೆದಂಡ ಆಗುತ್ತದೆ’ ಎಂದು ಪೌರಾಡಳಿತ ಸಚಿವ ರಹೀಂ ಖಾನ್‌ ಎಚ್ಚರಿಕೆ ನೀಡಿದರು.ಯುಜಿಡಿ‌ ತ್ಯಾಜ್ಯ ಸೋರಿಕೆಯಾಗಿ ಕುಡಿಯುವ ನೀರಿನಲ್ಲಿ ಸೇರಿಕೊಳ್ಳದಂತೆ ನೋಡಿಕೊಳ್ಳಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಮೂರು ತಿಂಗಳಿಗೊಮ್ಮೆ ಕುಡಿಯುವ ನೀರಿನ ಟ್ಯಾಂಕ್ ಕಡ್ಡಾಯವಾಗಿ ಶುದ್ಧಗೊಳಿಸಬೇಕು. ಈ ವಿಷಯದಲ್ಲಿ ಗಂಭೀರವಾಗಿರಬೇಕು ಎಂದು ಹೇಳಿದರು.ನಗರದ ಹಲವು ಕಡೆಗಳಲ್ಲಿ ನೀರಿನ ಪೈಪ್‌ ಒಡೆದು ಹೋಗಿದೆ. ಅದರೊಳಗೆ ಮಳೆ ನೀರು, ತ್ಯಾಜ್ಯ ಸೇರುತ್ತಿದೆ. ಒಡೆದಿರುವ ಪೈಪ್‌ಗಳನ್ನು ದುರಸ್ತಿಗೊಳಿಸಬೇಕು. ಚಿದ್ರಿ, ಶಹಾಪುರ ಗೇಟ್‌ ಸೇರಿದಂತೆ ಹಲವೆಡೆ 24X7 ಕುಡಿಯುವ ನೀರಿನ ಸಂಪರ್ಕ ನೀಡಿಲ್ಲ. ಆ ಕೆಲಸ ಬೇಗ ಮಾಡಬೇಕೆಂದು ಸೂಚಿಸಿದರು.

Tags: BidarDengue CaseDengue FeverDinesh GundaraoEshwar Khandreಈಶ್ವರ್‌ ಖಾಂಡ್ರೆ
Previous Post

ಮರೆಯಾಗುತ್ತಿರುವ ಗ್ರಾಮೀಣ ಆಟಗಳು

Next Post

ಬೀದರ್|ನಮಗೆ ರಾಮ- ರಹೀಮ್ ಎಲ್ಲರೂ ಒಂದೇ. : ಸಚಿವ ಈಶ್ವರ ಖಂಡ್ರೆ

Related Posts

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ
Top Story

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

by ಪ್ರತಿಧ್ವನಿ
April 11, 2026
0

ಭೂಮಿಯ ಮೇಲೆ ಹೆಚ್ಚುತ್ತಿರುವ ಮಾನವ ಜನಸಂಖ್ಯೆ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬುದು ಇತ್ತೀಚಿನ ಅಧ್ಯಯನವೊಂದರಿಂದ ಬೆಳಕಿಗೆ ಬಂದಿದೆ. ಪ್ರತಿ ವ್ಯವಸ್ಥೆಗೆ ಒಂದು ಮಿತಿ ಇರುವಂತೆ,...

Read moreDetails
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post

ಬೀದರ್|ನಮಗೆ ರಾಮ- ರಹೀಮ್ ಎಲ್ಲರೂ ಒಂದೇ. : ಸಚಿವ ಈಶ್ವರ ಖಂಡ್ರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada