ಬೆಂಗಳೂರು: ಜೂನ್.1: ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಂದು ಮೊದಲ ಬಾರಿಗೆ ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿದರು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ನಿರ್ದೇಶಕ (ಹಣಕಾಸು) ದರ್ಶನ್ ಜೆ.ನಿರ್ದೇಶಕ ತಾಂತ್ರಿಕ ರಮೇಶ್ ಹೆಚ್.ಜೆ ಅವರು ನೂತನ ಸಚಿವರನ್ನು ಸ್ವಾಗತಿಸಿ, ಸನ್ಮಾನಿಸಿದರು. ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಬಳಿಕ ಮೊದಲ ಬಾರಿಗೆ ಕೆ.ಜೆ.ಜಾರ್ಜ್ ಅವರು ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ಅಧಿಕಾರಗಳ ಜೊತೆ ಚರ್ಚೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವರು ಬೆಸ್ಕಾಂಗೆ ಸಂಬಂಧಿಸಿದಂತೆ ಅತೀ ಶೀಘ್ರದಲ್ಲೇ ಉನ್ನತ ಅಧಿಕಾರಿಗಳ ಸಭೆ ಕರೆಯುವುದಾಗಿ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.