• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಪಿಸಿಸಿ ಕಚೇರಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಜನಸ್ಪಂದನ…

ಪ್ರತಿಧ್ವನಿ by ಪ್ರತಿಧ್ವನಿ
August 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಕೆಪಿಸಿಸಿ ಕಚೇರಿಯಲ್ಲಿ ಸಚಿವ ಕೆ.ಜೆ.ಜಾರ್ಜ್ ಜನಸ್ಪಂದನ…
Share on WhatsAppShare on FacebookShare on Telegram

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಜನಸ್ಪಂದನ ಕಾರ್ಯಕ್ರಮದ ಮೂಲಕ ಇಂಧನ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಿ, ಪರಿಹಾರ ಕ್ರಮಗಳ ಕುರಿತು ಭರವಸೆ ನೀಡಿದರು.

ADVERTISEMENT

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಲಹೆಯಂತೆ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವರು, ಕಾರ್ಯಕರ್ತರು ಪ್ರಸ್ತಾಪಿಸಿದ ವಿಷಯಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ಟ್ರಾನ್ಸ್ ಫಾರ್ಮರ್ ಸಮಸ್ಯೆ, ಕುಸುಮ್ ಬಿ ಮತ್ತು ಕುಸುಮ್ ಸಿ ಅಡಿ ಅರ್ಜಿ ಸಲ್ಲಿಸುವುದು, ವಿದ್ಯುತ್ ಮಾರ್ಗಗಳ ಸ್ಥಳಾಂತರ, ಮಳೆಯಿಂದ ವಿದ್ಯುತ್ ಕಂಬ, ತಂತಿ ಮತ್ತು ಪರಿವರ್ತಕಗಳಿಗೆ ಹಾನಿಯಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಿರುವ ವ್ಯತ್ಯಯಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರು ಸಚಿವರ ಮುಂದೆ ಅಹವಾಲುಗಳನ್ನು ಹೇಳಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಮಳೆಯಿಂದ ಹಾನಿಗೊಳಗಾಗಿರುವ ವಿದ್ಯುತ್ ಕಂಬ, ತಂತಿಗಳನ್ನು ಸರಿಪಡಿಸಿ ವಿದ್ಯುತ್ ಮರು ಸ್ಥಾಪಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಟ್ರಾನ್ಸ್ ಫಾರ್ಮರ್ ಗಳನ್ನು ತಕ್ಷಣವೇ ದುರಸ್ತಿಗೊಳಿಸಿ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಾರಿ ಭಾರೀ ಮಳೆಯಿಂದ ಸಮಸ್ಯೆ ಆಗಿದ್ದು, ಹೆಚ್ಚುವರಿ ಸಿಬ್ಬಂದಿ ನೇಮಿಸಿ ತಕ್ಷಣವೇ ಸರಿಪಡಿಸಲಾಗುತ್ತಿದೆ. ಇಲಾಖೆ ಸಿಬ್ಬಂದಿ ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಇದರ ಮಧ್ಯೆಯೂ ಮಳೆ-ಗಾಳಿ ಮುಂದುವರಿದಿರುವುದರಿಂದ ಕೆಲವೆಡೆ ಇನ್ನೂ ಸಮಸ್ಯೆ ಮುಂದುವರಿದಿದೆ. ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಂಡು ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಂಡು ವಿದ್ಯುತ್ ಮರುಸ್ಥಾಪನೆ ಮಾಡಲಾಗುತ್ತಿದೆ”, ಎಂದು ಹೇಳಿದರು.

“ಕುಸುಮ್ ಬಿ ಅಡಿ ಈಗಾಗಲೇ ಸ್ವೀಕರಿಸಿರುವ ಅರ್ಜಿಗಳ ಆಧಾರದ ಮೇಲೆ ಸಮೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಮುಗಿದ ಕೂಡಲೇ ಫಲಾನುಭವಿಗಳಿಗೆ ಸೋಲಾರ್ ಪಂಪ್ ಸೆಟ್ ಒದಗಿಸಲಾಗುವುದು. ಕುಸುಮ್ ಸಿ ವಿಚಾರದಲ್ಲಿ ಸೋಲಾರ್ ಪ್ಯಾನಲ್ ಅಳವಡಿಸಲು ಭೂಮಿ ಗುರುತಿಸಲಾಗುತ್ತಿದೆ. ಈ ಎರಡೂ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಇನ್ನಷ್ಟು ಸ್ಪಂದನೆ ಸಿಕ್ಕಿದರೆ ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ, ಅದರಲ್ಲೂ ಮುಖ್ಯವಾಗಿ ಐಪಿ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಎದುರಾಗುವುದಿಲ್ಲ”, ಎಂದರು.

“ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ, ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಅಧಿಕಾರಿಗಳು ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳ ಸಲಹೆ ಪಡೆದು ಕೆಲಸ ಮಾಡುವಂತೆ ನಿರ್ದೇಶನ ನೀಡಿದ್ದೇನೆ. ಅದರಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯಾದ್ಯಂತ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ”, ಎಂದು ಹೇಳಿದರು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ತಮ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಸಚಿವರ ಮುಂದಿಟ್ಟರು. ಎಲ್ಲವನ್ನು ಸಾವಧಾನದಿಂದಲೇ ಆಲಿಸಿದ ಸಚಿವರು, ಕಾಲಮಿತಿಯಲ್ಲಿ ಅವುಗಳನ್ನು ಬಗೆಹರಿಸುವುದಾಗಿ ತಿಳಿಸಿದರು.

Tags: BJPCongress PartyJanaspandanakjgeorgeKPCCKPCC officeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರದ ಬಗ್ಗೆ ಮಾತಾಡೋಕೆ ಬಿಜೆಪಿವರಿಗೆ ನೈತಿಕತೆ ಇಲ್ಲ ಕೆ ಜೆ ಜಾರ್ಜ್..!

Next Post

ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚು ಮಾಡಿಕೊಳ್ಳಲು ತಪ್ಪದೇ ಈ ಪದಾರ್ಥಗಳನ್ನ ಸೇವಿಸಿ.!

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚು ಮಾಡಿಕೊಳ್ಳಲು ತಪ್ಪದೇ ಈ ಪದಾರ್ಥಗಳನ್ನ ಸೇವಿಸಿ.!

ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚು ಮಾಡಿಕೊಳ್ಳಲು ತಪ್ಪದೇ ಈ ಪದಾರ್ಥಗಳನ್ನ ಸೇವಿಸಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada