ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸಭೆ ನಡೆಯಿತು.
KPTCL/ಎಲ್ಲಾ ESCOM ಉಪ ಕೇಂದ್ರಗಳ ಬಳಿ ಸೋಲಾರ್ ಪಾರ್ಕ್ಗಳ ಸ್ಥಾಪನೆ. ಐಪಿ ಫೀಡರ್ ಸೋಲಾರೈಸೇಶನ್ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆಯಿತು.

ಈ ಯೋಜನೆಗಳ ಅನುಷ್ಠಾನವು ಸ್ಥಳೀಯ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಹಗಲಿನಲ್ಲಿ ರೈತರಿಗೆ ಇರುವ ವಿದ್ಯುತ್ ಅಗತ್ಯಗಳನ್ನು ಸಮರ್ಥವಾಗಿ ಪೂರೈಸುತ್ತದೆ. ನಂತರ ಮಾನ್ಯ ಸಚಿವರು ಬೆಂಗಳೂರು ಮತ್ತು ಮೈಸೂರು ನಗರಗಳಲ್ಲಿ ಭೂಗತ ಕೇಬಲ್ಗಳ ಅಳವಡಿಕೆಯನ್ನು ಪರಿಶೀಲಿಸಿ ಚರ್ಚಿಸಲು ಮತ್ತೊಂದು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಇದರಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಕೆಆರ್ಇಡಿಎಲ್ನ ವ್ಯವಸ್ಥಾಪಕ ನಿರ್ದೇಶಕರಾದ ರುದ್ರಪ್ಪಯ್ಯ, ತಾಂತ್ರಿಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಈ ಎಲ್ಲಾ ಸಭೆಗಳು ನಡೆದವು.