ಕರೋನಾ ಮತ್ತು ಅದರ ರೂಪಾಂತರಿ ಓಮಿಕ್ರಾನ್ ರಾಜ್ಯದ್ಯಾಂತ ತನ್ನ ನಾಗಲೋಟವನ್ನು ಮುಂದುವರೆಸಿದೆ. ಕಳೆದ ಹಲವು ದಿನಗಳಿಂದ ರಾಜ್ಯ ಸಚಿವ ಸಂಪುಟಕ್ಕೆ ಕರೋನ ವೈರೆಸ್ ತಗುಲಿದ್ದು ಒಬ್ಬರಮೇಲೊಬ್ಬರು ನನಗೆ ಕರೋನ ಪಾಸಿಟಿವ್ ದೃಢವಾಗಿದೆ, ನನ್ನ ಸಂಪರ್ಕದಲ್ಲಿ ಇದ್ದವರೂ ಸಹ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡತೊಡಗಿದ್ದಾರೆ. ಈ ಸಾಲಿಗೆ ಈಗ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರೂ ಸೇರಿದ್ದಾರೆ.
ಹೌದು, ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.