ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್.ಟಿ.ಐ. ವಾರ್ಷಿಕ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಭಾಗವಹಿಸಿದ್ದರು.

ಸಾಂವಿಧಾನಿಕ ಸವಾಲುಗಳು, ನ್ಯಾಯ, ಹಕ್ಕುಗಳು ಮತ್ತು ಕಾನೂನಿನ ನಿಯಮಗಳಿಗೆ ಅನುಸಾರವಾಗಿ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಈ ಸಮಾವೇಶ ಒಂದು ಪ್ರಮುಖ ವೇದಿಕೆಯಾಯಿತು ಎಂದು ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi), ಸಂಸದರಾದ ಪ್ರಿಯಾಂಕಾ ಗಾಂಧಿ(Priyanka Gandhi), ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar), ವಿವಿಧ ಸಚಿವರು, ವಿವಿಧ ರಾಜ್ಯಗಳ ಪಕ್ಷದ ಮುಖಂಡರು ಇದ್ದರು.









