• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
September 24, 2023
in Top Story, ಕರ್ನಾಟಕ
0
ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Share on WhatsAppShare on FacebookShare on Telegram


ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾಜಿಕ ನ್ಯಾಯದ ಅಡಿಯಲ್ಲಿ, ಪ್ರತಿಯೊಬ್ಬ ನಾಗರೀಕರಿಗೂ ಅನುಕೂಲವಾಗುವಂತೆ ಸಾಮಾಜಿಕ ಕಳಕಳಿಯಿಂದ ಪ್ರತಿವರ್ಷ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ, ವಿಕಲಚೇತನರು ಮತ್ತು ಹಿರಿಯ ನಾಗರೀಕರು ಸೇರಿದಂತೆ ಪ್ರತಿಯೊಬ್ಬರಿಗೂ ಈ ಯೋಜನೆಗಳನ್ನು ಅವರ ಮನೆಯ ಬಾಗಿಲಿಗೆ ತಲಪಿಸುವ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಭಾನುವಾರ ನಡೆದ ರಾಷ್ಟೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ವಿಕಲಚೇತನರಲ್ಲಿ 6800 ಜನರಿಗೆ ವಿವಿಧ ದೈನಂದಿನ ಚಟುವಟಿಕೆಗಳನ್ನು ಕೈಗೊಳ್ಳಲು ವಾಹನಗಳ ಅವಶ್ಯಕತೆಯಿದ್ದು, ಈ ವರ್ಷ ಮೊದಲ ಹಂತದಲ್ಲಿ 3000 ಜನರಿಗೆ 30 ಕೋಟಿ ವೆಚ್ಚದಲ್ಲಿ ವಾಹನಗಳನ್ನು ವಿತರಿಸಲಾಗುವುದು ಉಳಿದವರಿಗೆ ಮುಂದಿನ ವರ್ಷ ನೀಡಲಾಗುವುದು , ವಿಕಲಚೇತನರು ದೈಹಿಕವಾಗಿ ದುರ್ಬಲರಾಗಿರಬಹುದು ಆದರೆ ಮಾನಸಿಕವಾಗಿ ಅವರು ಇತರರಿಗಿಂತ ಸದೃಢವಾಗಿರುತ್ತಾರೆ , ಇವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಕುಂದು ಕೊರತೆ ಆಲಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಪ್ರತಿ ತಿಂಗಳ 25 ರಂದು ಜನತಾ ದರ್ಶನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದಕೊರತೆಗಳನ್ನು ಜನತಾದರ್ಶನದ ಮೂಲಕ ಬಗೆಹರಿಸಿಕೊಳ್ಳುವಂತೆ ಸಚಿವರು ತಿಳಿಸಿದರು.

ಈ ವೇಳೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿ.ಪಂ. ಸಿಇಒ ಪ್ರಸನ್ನ ಹೆಚ್,ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಉಪವಿಭಾಗಧಿಕಾರಿ ರಶ್ಮಿ ಮತ್ತಿತರರು ಇದ್ದರು.

Tags: KarnatakaLakshmi hebbalkarUdupi
Previous Post

ಮುಸ್ಲಿಂ ಸಮುದಾಯ ಮತ ಕೊಡಲಿಲ್ಲ ಎಂದು ಜೆಡಿಎಸ್ ಶಾಸಕರು ಬಹಿರಂಗವಾಗಿ ಹೇಳಲಿ: ಜಮೀರ್ ಅಹಮದ್ ಖಾನ್   

Next Post

ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿ: ಬೈಕ್ ಸವಾರ ಸಾವು

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿ: ಬೈಕ್ ಸವಾರ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada