• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಮಹಿಳೆ ಕೇವಲ ಒಂದು ಕುಟುಂಬದ ಭಾಗವಲ್ಲ, ಸಮಾಜದ ಶಕ್ತಿ, ಸಂಸ್ಕೃತಿಯ ಸಾರಥಿ”

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಸಂದೇಶ..

ಪ್ರತಿಧ್ವನಿ by ಪ್ರತಿಧ್ವನಿ
March 8, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
“ಮಹಿಳೆ ಕೇವಲ ಒಂದು ಕುಟುಂಬದ ಭಾಗವಲ್ಲ, ಸಮಾಜದ ಶಕ್ತಿ, ಸಂಸ್ಕೃತಿಯ ಸಾರಥಿ”
Share on WhatsAppShare on FacebookShare on Telegram

ಬೆಂಗಳೂರು : ಮಹಿಳೆ ಎಂದರೆ ಕೇವಲ ಒಂದು ಕುಟುಂಬದ ಭಾಗವಲ್ಲ; ಸಮಾಜದ ಶಕ್ತಿ, ಸಂಸ್ಕೃತಿಯ ಸಾರಥಿ ಮತ್ತು ಭವಿಷ್ಯದ ನಿರ್ಮಾತೃ. ಮಹಿಳೆಯರು ಶಿಕ್ಷಣ, ಉದ್ಯೋಗ, ವಿಜ್ಞಾನ, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಾಧನೆಯ ಹೊಸ ಅಧ್ಯಾಯಗಳನ್ನು ಬರೆಯುತ್ತಿರುವ ಈ ಕಾಲಘಟ್ಟದಲ್ಲಿ ನಾವು ಅವರ ಸಾಧನೆಗಳನ್ನು ಗೌರವಿಸುವುದೂ, ಮತ್ತಷ್ಟು ಅವಕಾಶಗಳನ್ನು ಸೃಷ್ಟಿಸುವುದೂ ಅತ್ಯಂತ ಮುಖ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT
UPSC Topper Kiran Kamate Interview | UPSC Topper Kiran Kamate Shares Success Tips Tips to Face UPSC

ಮಹಿಳಾ ದಿನಾಚರಣೆ ಹಿನ್ನೆಲೆ ನಾಡಿನ ಮಹಿಳೆಯರಿಗೆ ವಿಶೇಷ ನೀಡಿರುವ ಅವರು, ನಮ್ಮ ಸಮಾಜದ ಇತಿಹಾಸವನ್ನು ನೋಡಿದಾಗ ಮಹಿಳೆಯರು ಅನೇಕ ಸವಾಲುಗಳನ್ನು ಎದುರಿಸಿ ಮುಂದೆ ಬಂದಿರುವುದು ಕಾಣಿಸುತ್ತದೆ. ಶತಮಾನಗಳ ಹಿಂದೆ ಸಮಾನತೆಗಾಗಿ ನಡೆದ ಹೋರಾಟಗಳು ಇಂದು ನಮ್ಮ ಸಮಾಜವನ್ನು ಹೆಚ್ಚು ನ್ಯಾಯಸಮ್ಮತ ಮತ್ತು ಪ್ರಗತಿಪರವಾಗಿಸಿವೆ. ನಮ್ಮ ಕರ್ನಾಟಕದ ನೆಲದಲ್ಲಿ ಬಸವಾದಿ ಶರಣರು ಸಾರಿದ ಸಮಾನತೆಯ ಚಿಂತನೆ ಮಹಿಳೆಯರಿಗೂ ಗೌರವಯುತ ಸ್ಥಾನವನ್ನು ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.

No photo description available.
ಇಂದು ಶಿಕ್ಷಣ, ಆಡಳಿತ, ಉದ್ಯಮ, ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಇತ್ತೀಚಿನ ಸ್ಪರ್ಧಾತ್ಮಕ ಪರೀಕ್ಷೆಗಳು, ಆಡಳಿತ ಸೇವೆಗಳು ಮತ್ತು ವೃತ್ತಿ ಕ್ಷೇತ್ರಗಳಲ್ಲಿ ಕನ್ನಡದ ಹೆಣ್ಣುಮಕ್ಕಳು ಸಾಧಿಸುತ್ತಿರುವ ಯಶಸ್ಸು ನಮ್ಮ ರಾಜ್ಯದ ಹೆಮ್ಮೆ. ಅವರ ಸಾಧನೆ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೆ ಸ್ಪೂರ್ತಿಯಾಗಬೇಕು. ರಾಜ್ಯ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ವಿಶೇಷವಾಗಿ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಸಾಮಾಜಿಕ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಮಹಿಳೆಯರು ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ಅವಕಾಶಗಳನ್ನು ಸಮಾನವಾಗಿ ಪಡೆಯಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.

Google Gemini AI Photo Editing Prompts for International Women's Day 2026
ಮಹಿಳೆಯರ ಗೌರವ, ಭದ್ರತೆ ಮತ್ತು ಸ್ವಾವಲಂಬನೆ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಮಹಿಳೆಯರು ಕುಟುಂಬದ ನಿರ್ವಹಣೆಯಲ್ಲಿ ಮಾತ್ರವಲ್ಲದೆ ಸಮಾಜದ ಅಭಿವೃದ್ಧಿಯಲ್ಲಿಯೂ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಅವರ ಶ್ರಮ, ತ್ಯಾಗ ಮತ್ತು ಸಮರ್ಪಣೆ ನಮ್ಮ ಸಮಾಜದ ಬಲವಾದ ಅಡಿಪಾಯವಾಗಿದೆ. ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು ನಾವು ಎಲ್ಲರೂ ಮಹಿಳೆಯರ ಸಾಧನೆಗಳನ್ನು ಗೌರವಿಸಿ, ಸಮಾನತೆ ಮತ್ತು ನ್ಯಾಯಯುತ ಸಮಾಜ ನಿರ್ಮಾಣದತ್ತ ಮತ್ತಷ್ಟು ಬದ್ಧರಾಗೋಣ. ನಾಡಿನ ಪ್ರತಿಯೊಂದು ಮಹಿಳೆಯೂ ಆತ್ಮವಿಶ್ವಾಸದಿಂದ, ಸ್ವಾಭಿಮಾನದಿಂದ ಬದುಕುವಂತಹ ಕರ್ನಾಟಕವನ್ನು ನಿರ್ಮಿಸುವುದು ನಮ್ಮೆಲ್ಲರ ಕನಸು. ಆ ಕನಸು ನನಸಾಗಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂಬ ಸಂದೇಶದೊಂದಿಗೆ ಲಕ್ಷ್ಮಿ ಹೆಬ್ಬಾಳ್ಕರ್  ರಾಜ್ಯದ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳನ್ನು ಕೋರಿದ್ದಾರೆ.

Tags: Gruha Jyoti SchemeGruhalxmi Schemeguarantee schemesinternational womens daylaxmi hebbalkarMinister Of KarnatakaPratidhvanishakti schemeWomen and Child DevelopmentWomens Day Special MessageWomens day wishes
Previous Post

ಸಿದ್ದರಾಮಯ್ಯನವ್ರಿಗೆ ವಿಶ್ವಾಸ ದ್ರೋಹ ಬಗೆದ್ರಾ..?

Next Post

World Cup Final – ಭಾರತ – ನ್ಯೂಜಿಲೆಂಡ್‌ ಫೈನಲ್‌ ಪಂದ್ಯ : ಯಾರ ಮುಡಿಗೆ ಗೆಲುವಿನ ಕಿರೀಟ..?

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
World Cup Final – ಭಾರತ – ನ್ಯೂಜಿಲೆಂಡ್‌ ಫೈನಲ್‌ ಪಂದ್ಯ : ಯಾರ ಮುಡಿಗೆ ಗೆಲುವಿನ ಕಿರೀಟ..?

World Cup Final - ಭಾರತ - ನ್ಯೂಜಿಲೆಂಡ್‌ ಫೈನಲ್‌ ಪಂದ್ಯ : ಯಾರ ಮುಡಿಗೆ ಗೆಲುವಿನ ಕಿರೀಟ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada