• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Health Care

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಸಂಕೇತವಾಗಿ 14 ಇ.ಸಿ ಜಿ ಮೆಷಿನ್ ಗಳನ್ನು ಸಂಬಂಧ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ನೀಡಿದರು.

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Health Care, Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ ಸಿ ಜಿ (ECG Machines) ಯಂತ್ರವನ್ನು ಸಿ ಆರ್ ಎಸ್ (CSR) ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ (Minister N Cheluvarayaswamy) ಅವರು ಹೇಳಿದರು.

ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಮಿಮ್ಸ್ ಆಡಿಟೋರಿಯಂ ನಲ್ಲಿ ಆಯೋಜಿಸಲಾಗಿದ್ದ ರಾಜ್ಯದಲ್ಲೇ ಪ್ರಥಮವಾಗಿ ದಂತ ಚಿಕಿತ್ಸೆಯ ಆಶಾಕಿರಣ ಉದ್ಘಾಟನಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ಸನ್ನಿವೇಶದಲ್ಲಿ ವಾತಾವರಣವೇ ವಿಷವಾಗಿ ಪರಿವರ್ತನೆಗೊಳ್ಳುತ್ತಿದೆ, ಆದ್ದರಿಂದಲೇ ಮಗು ಹುಟ್ಟುವ ಮೊದಲು ಹತ್ತಾರು ಚಿಕಿತ್ಸೆ ಹಾಗೂ ಹುಟ್ಟಿದ ನಂತರವೂ ಹಲವಾರು ಚಿಕಿತ್ಸೆಗಳಿಗೆ ಒಳಪಡಿಸಲಾಗುತ್ತಿದೆ ಎಂದ ವಿಷಾದ ವ್ಯಕ್ತಪಡಿಸಿದರು.

ಸಾರ್ವಜನಿಕರು ಕೂಡ ತಮ್ಮ ಆರೋಗ್ಯ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು ಅದು ನಮ್ಮ ಕರ್ತವ್ಯ. ಎಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ತಮ್ಮ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಕೆಲಸ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಸಹ ಅತಿ ಮುಖ್ಯ, ವಸಡುಗಳ ಬದಲಾವಣೆ, ವಸ್ತುಗಳಿಗೆ ಚಿಕಿತ್ಸೆ ಇನ್ನೂ ಅನೇಕ ದಂತಕ್ಕೆ ಸಂಬಂಧ ಪಟ್ಟ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಾರಂಭಿಕವಾಗಿ ಮಳವಳ್ಳಿ ಹಾಗೂ ನಾಗಮಂಗಲದ ವಸಡುಗಳಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗುತ್ತದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ದಂತ ಚಿಕಿತ್ಸೆಯ ಆಶಾಕಿರಣ ಯೋಜನೆಯಡಿ ವಸಡುಗಳ ಚಿಕಿತ್ಸೆ ಪ್ರಾರಂಭವಾಗುತ್ತದೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ದಂತ ಚಿಕಿತ್ಸೆಯ ಆಶಾಕಿರಣ ಯೋಜನೆಯಡಿ ನುರಿತ ದಂತ ವೈದ್ಯರು ಆಗಮಿಸಿ ತಪಾಸಣೆ ನಡೆಸಲಿದ್ದಾರೆ. 30-40 ಸಾವಿರ ತಗುಲುವ ಚಿಕಿತ್ಸೆಗಳನ್ನು ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ 2-3 ಸಾವಿರ ತೆಗೆದುಕೊಂಡು ಚಿಕಿತ್ಸೆ ಮಾಡಲಾಗುವುದು ಸಾರ್ವಜನಿಕರು ಇಂತಹ ಸದಾವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ನಮ್ಮ ಜಿಲ್ಲೆಯಲ್ಲಿಯೇ ಆದಿ ಚುಂಚನಗಿರಿ ಆಸ್ಪತ್ರೆ ಇದೆ ಅಲ್ಲೂ ಸಹ ನುರಿತ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸರಿಯಾಗಿ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ(KR Nandhini), ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ(SP Mallikarjun Baladandi), ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ ಮೋಹನ್(Dr. K Mohan), ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ(Dr. Narasimhaswamy), ಜಿಲ್ಲಾ ವೈದ್ಯಕೀಯ ಅಧೀಕ್ಷಕ ಶಿವಕುಮಾರ್(Shivakumar), ಆರ್ ಸಿ ಎಚ್ ಅಧಿಕಾರಿ ಡಾ ಅಶ್ವತ್ಥ್, ಡಾ. ಆಶಾಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: CEO KR NandhiniCheluvanarayanaswamycheluvaraya swamy mlaCheluvarayaswamycheluvarayaswamy latest newscheluvarayaswamy mandyacheluvarayaswamy mlacheluvarayaswamy newscheluvarayaswamy reactioncheluvarayaswamy speechDK ShivakumarECGex mla cheluvarayaswamyformer mla chaluvarayaswamyGovt HospitalsHospitalsK MohanKarnatakaMallikarjun BaladandiMandyaMinisterMinister CheluvarayaswamyMLAmla cheluvarayaswamyMLA RavikumarN Cheluvarayaswamyn cheluvarayaswamy newsn cheluvarayaswamy sonn cheluvarayaswamy todaysachin cheluvarayaswamyshivakumarsiddaramaiah
Previous Post

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

Next Post

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

Related Posts

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ
ಅಂಕಣ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

by ಪ್ರತಿಧ್ವನಿ
April 10, 2026
0

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ ಅದರ ಗರ್ಭದಲ್ಲಿರುವ ಕ್ಷೀಣ ದನಿಗಳನ್ನು ಸಮಾಜಕ್ಕೆ ಮರುಪರಿಚಯಿಸುವ ಸಾಹಿತ್ಯಿಕ ಕೃತಿ “ ಹಾಸನ ಮಣ್ಣಿನ ಹೆಣ್ಣು ದನಿಗಳು ” ನಾ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada