• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಪ್ರತಿಧ್ವನಿ by ಪ್ರತಿಧ್ವನಿ
June 26, 2025
in Top Story, ಕರ್ನಾಟಕ
0
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Share on WhatsAppShare on FacebookShare on Telegram
  • ಕೆಡಿಪಿ ಸಭೆಯ ನಂತರ ಕ್ಯಾಬಿನೆಟ್ ಗೆ ವರದಿ
  • ಮಳೆಹಾನಿ ತಡೆಗೆ ಶಾಶ್ವತ ಪರಿಹಾರಕ್ಕೂ ಸೂಕ್ತ ಯೋಜನೆ ಅನುಷ್ಠಾನ

ಕೊಡಗು, ಜೂ. 26: ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಈ ವರದಿ ಆಧಾರ ಮೇಲೆ ಜುಲೈ 2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.

ADVERTISEMENT

ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಹಾರಂಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇತ್ತು. ಭಾರೀ ಮಳೆಯಿಂದ ರಸ್ತೆ, ಸೇತುವೆಗಳಿಗೆ ಹಾನಿಯಾಗಿದೆ. ಆದರೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರಿಂದ ಪ್ರಾಣಹಾನಿ ಆಗಿಲ್ಲ ಎಂದು ಹೇಳಿದರು.

DK Shivakumar on Siddaramaiah: BR ಪಾಟೀಲ್, ರಾಜು ಕಾಗೆಗೆ ಎಚ್ಚರಿಕೆ ಕೊಟ್ಟಿದ್ರಾ ಸರ್?  #pratidhvani

ಕೊಡಗು ಜಿಲ್ಲೆಯಲ್ಲಿ ಮಳೆಯಾದರೆ ದಕ್ಷಿಣ ಕರ್ನಾಟಕ ಭಾಗಕ್ಕೆ ಹೆಚ್ಚು ಅನುಕೂಲವಾಗುತ್ತದೆ. ಆದರೆ, ಹೆಚ್ಚು ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಕೆಡಿಪಿ ಸಭೆಯಲ್ಲಿ ಎಷ್ಟು ಮನೆ, ರಸ್ತೆ, ಸೇತುವೆಗಳು ಹಾನಿಯಾಗಿವೆ ಎಂಬ ಮಾಹಿತಿ ಪಡೆದು ತಕ್ಷಣದ ಪರಿಹಾರ ಕಾರ್ಯಕ್ಕೆ ಕೂಡಲೇ ಹಣ ಬಿಡುಗಡೆ ಮಾಡಲಾಗುವುದು. ಇದರ ಜತೆಗೆ ಶಾಶ್ವತ ಪರಿಹಾರಕ್ಕೆ ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಈ ಹಿಂದೆ ಮಳೆಯಿಂದ ರಸ್ತೆ, ಸೇತುವೆಗಳು ಹಾನಿಗೊಳಗಾಗಿದ್ದರೆ ಹಣ ಬಿಡುಗಡೆಗೆ ಕೆಲವು ಮಾನದಂಡಗಳಿದ್ದವು. ಆದರೆ, ಇದೀಗ ಎಷ್ಟು ಹಾನಿಯಾಗಿದೆಯೋ ಅಷ್ಟು ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ ಆಗಿರುವ ಹಾನಿ ಕುರಿತಂತೆ ವರದಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ವರದಿ ಸಲ್ಲಿಸಿದ ಕೂಡಲೇ ಕಂದಾಯ ಸಚಿರು, ಇಲಾಖೆ ಕಾರ್ಯದರ್ಶಿಗಳು ಹಾಗೂ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸೂಕ್ತ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಕೊಡಗಿನ ಕುಶಾಲನಗರ ಮತ್ತು ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಸಂಪರ್ಕದ ವೇದಿಕೆಯಾಗಿದ್ದ ರಾಮಸ್ವಾಮಿ ಕಣವೆ ತೂಗು ಸೇತುವೆ ಮುಚ್ಚಿರುವುದರಿಂದ ಆಗುತ್ತಿರುವ ಸಮಸ್ಯೆ ಗಮನದಲ್ಲಿದೆ. ಶೀಘ್ರದಲ್ಲೇ ಸಚಿವ ಎಂ. ವೆಂಕಟೇಶ್ ಅವರ ಜತೆ ಮಾತನಾಡಿ ಸೇತುವೆಯನ್ನು ಮತ್ತೆ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮಾರಾಜನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Tags: heavy rain in kodaguheavy rain kodaguheavy rains in kodagukarnataka heavy rainskarnataka rainsKodagukodagu floodkodagu floodskodagu heavy rainkodagu landslidekodagu latest newskodagu newskodagu rainkodagu rain damagekodagu rain effectkodagu rain floodkodagu rain newskodagu rain updatekodagu rain updateskodagu rainfallkodagu rainskodagu today newsrain in kodagurain in kodagu rainrains in karnataka
Previous Post

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada