ಮೈಸೂರು: ಟೋಲ್ ಸಂಗ್ರಹ ( toll collection ) ಹೆಚ್ಚಳದ ಕುರಿತು ಎನ್. ಚಲುವರಾಯಸ್ವಾಮಿ ( N. Chaluvaraya Swamy ) ಆಕ್ರೋಶ ವ್ಯಕ್ತ ಪಡಿಸಿದ್ದು ಮೈಸೂರಿನಲ್ಲಿ ( Mysore ) ಈ ಕುರಿತು ಸಚಿವ ಎನ್ ಚಲುವರಾಯಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿ, ಎರಡನೇ ಟೋಲ್ ಸಂಗ್ರಹ ಆರಂಭ ವಿಚಾರವಾಗಿ ಕೇಂದ್ರ ಬಿಜೆಪಿ ( BjP) ಸರ್ಕಾರ ತನ್ನ ಉದ್ಧಟತನವನ್ನ ಪ್ರದರ್ಶನ ಮಾಡಿದೆ.
ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಆದರೆ ಪ್ರತ್ಯಕ್ಷವಾಗಿ ಪ್ರತಿಭಟನೆಗೆ ಹೋಗುವುದಿಲ್ಲ. ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಣಯವನ್ನ ಪರಿಗಣನೆಗೆ ತೆಗೆದುಕೊಂಡಿಲ್ಲ. ಟೋಲ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ. ಈ ಸಂಬಂಧ ನಮ್ಮ ಶಾಸಕರು ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಸಿ.ಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ
ಇನ್ನು ಕಾಂಗ್ರೆಸ್-ಬಿಜೆಪಿ ನಡುವೆ ಪಂಚೆ ರಾಜಕೀಯ ಮುನ್ನೆಲೆಗೆ ಬಂದಿರುವ ವಿಚಾರ ಕುರಿತು ಮಾತನಾಡಿದ ಸಚಿವ ಎನ್ ಚಲುವರಾಯಸ್ವಾಮಿ. ಮೊದಲು ಸಿ ಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಎಂದು ಸಿದ್ದು, ಡಿಕೆಶಿ ಪಂಚೆ ಬಗ್ಗೆ ಮಾತಾಡಿರುವ ಸಿ ಟಿ ರವಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.
ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ, 65 ಸ್ಥಾನಕ್ಕೆ ಕುಸಿದಿರುವ ಅವರಲ್ಲಿ ಕಚ್ಚಾಟ ಇಲ್ವಾ, ನಮ್ಮಲ್ಲಿ ಡಿಕೆಶಿ, ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರಾ?, ಸುಮ್ಮನೇ ಅವರೇ ಕಲ್ಪಿಸಿಕೊಂಡು ಮಾತಾನಾಡುತ್ತಾರೆ, ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ. ಅದರಲ್ಲಿ ಒಬ್ಬರು ಇಬ್ಬರು ಉಳಿದುಕೊಂಡಿದ್ದಾರೆ. ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ, ನಮ್ಮ ಪಂಚೆ ಸರಿ ಮಾಡೋದು ಬೇಡ. ಮೊದಲು ಅವರ ಪಂಚೆ ಸರಿ ಮಾಡಿಕೊಳ್ಳೋಕೆ ಹೇಳಿ ಎಂದು ಬಿಜೆಪಿಯ ವಿರುದ್ಧ ಆಕ್ರೋಶವನ್ನ ಹೊರಹಾಕಿದ್ದಾರೆ