• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕ ರಾಜ್ಯವನ್ನು ಮುಂಚೂಣಿಯಲ್ಲಿರಿಸುವ ಗುರಿ: ಸಚಿವ ಎನ್‌ ಎಸ್‌ ಭೋಸರಾಜು. ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ADVERTISEMENT

ಇಂದು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ QpiAI ಸಂಸ್ಥೆಯ ಕಾರ್ಲೆ ಟೌನ್ SEZ (Karle Town SEZ) ಆಫೀಸ್‌ಗೆ ಭೇಟಿ ನೀಡಿ, ಭಾರತದಲ್ಲಿ ನಿರ್ಮಿತವಾದ ಅತ್ಯಾಧುನಿಕ ಕ್ವಾಂಟಮ್ ಕಂಪ್ಯೂಟರ್ – QpiAI Indus ಅನ್ನು ವೀಕ್ಷಿಸಿದರು.

Zameer Ahmed :  ನಾನು ಹಣ ಪಡೆದ್ರೆ ದೇವ್ರು ಒಳ್ಳೇದು ಮಾಡ್ತಾನಾ #pratidhvani

ಈ ಸಂದರ್ಭದಲ್ಲಿ ಸಂಸ್ಥೆಯ ತಜ್ಞರು ಮಾಡಿದ ಡೆಮೊನ್ಸ್ಟ್ರೇಷನ್‌ನಲ್ಲಿ QpiAI Indus ನ ತಂತ್ರಜ್ಞಾನ ಸಾಮರ್ಥ್ಯಗಳನ್ನು ವಿವರಿಸಿದರು. ಇದು ಭಾರತೀಯ ಕ್ವಾಂಟಮ್ ಸಂಶೋಧನೆಯಲ್ಲಿನ ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ, ಹಣಕಾಸು, ರಾಷ್ಟ್ರದ ಭದ್ರತೆ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಅಪಾರವಾಗಿ ಬಳಸಬಹುದಾದ ತಂತ್ರಜ್ಞಾನವಾಗಿದೆ ಎಂದು ತಿಳಿಸಿದರು.

ಭೇಟಿಯ ನಂತರ ಸಚಿವ ಎನ್‌ ಎಸ್‌ ಭೋಸರಾಜು ಮಾತನಾಡಿ, “ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕವನ್ನು ರಾಷ್ಟ್ರದ ಕೇಂದ್ರ ಬಿಂದುವಾಗಿ ರೂಪಿಸುವ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಕ್ವಾಂಟಮ್ ತಂತ್ರಜ್ಞಾನವು ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಕ್ರಾಂತಿಯತ್ತ ನಡೆಸುತ್ತಿದೆ. ಕ್ವಾಂಟಮ್ ಕಂಪ್ಯೂಟರ್ ಮಾತ್ರವಲ್ಲದೆ, ಕ್ವಾಂಟಮ್ ಸುರಕ್ಷಿತ ಸೈಬರ್ ತಂತ್ರಜ್ಞಾನ, ಕ್ವಾಂಟಮ್ ಇಮೇಜಿಂಗ್, ಹಾಗೂ ಕ್ವಾಂಟಮ್ ನೆಟ್‌ವರ್ಕಿಂಗ್ ಎಲ್ಲವೂ ಭವಿಷ್ಯದ ತಂತ್ರಜ್ಞಾನದ ಮೂಲಭೂತ ಅಂಶಗಳಾಗಿವೆ. ಇದನ್ನು ಮುಂಚಿತವಾಗಿ ಅಳವಡಿಸಿಕೊಂಡ ರಾಷ್ಟ್ರಗಳು ಮತ್ತು ರಾಜ್ಯಗಳು ತಾಂತ್ರಿಕ ಮತ್ತು ಆರ್ಥಿಕವಾಗಿ ಮುಂಚೂಣಿಗೆ ಬರಲಿವೆ.”

“ಬೆಂಗಳೂರು ಭಾರತದ ನವೀನತೆಯ ರಾಜಧಾನಿಯಾಗಿದ್ದು, ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಎಲ್ಲ ರೀತಿಯ ಪೂರಕ ಸೌಕರ್ಯಗಳನ್ನು ಹೊಂದಿದೆ. ಇಲ್ಲಿ ಶ್ರೇಷ್ಟ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕಾ ಪಾಠಶಾಲೆಗಳು, ನಿಪುಣ ತಂತ್ರಜ್ಞಾನ ಸಿಬ್ಬಂದಿ ಹಾಗೂ ತಂತ್ರಜ್ಞಾನ ಸ್ನೇಹಿ ಮೂಲಸೌಕರ್ಯಗಳು ಲಭ್ಯವಿರುವುದರಿಂದ ಬೆಂಗಳೂರನ್ನು ಕ್ವಾಂಟಮ್ ತಂತ್ರಜ್ಞಾನದ ಕೇಂದ್ರೀಯ ತಾಣವನ್ನಾಗಿ ರೂಪಿಸುವ ಉದ್ದೇಶ ನಮ್ಮದು. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಕ್ವಾಂಟಮ್‌ ಇಂಡಿಯಾ ಬೆಂಗಳೂರು ಸಮಾವೇಶವನ್ನು ಆಯೋಜಿಸುತ್ತಿದ್ದೇವೆ”

H Vishwanath | ಸಿದ್ದರಾಮಯ್ಯ ನವೆಂಬರ್ ಭವಿಷ್ಯ ನುಡಿದ ಎಂಎಲ್​ಸಿ ವಿಶ್ವನಾಥ್ #pratidhvani

ಈ ಭೇಟಿಯ ಸಮಯದಲ್ಲಿ QpiAI ಸಂಸ್ಥೆಯ ಪ್ರತಿನಿಧಿಗಳು ತಾವು ಕರ್ನಾಟಕದಲ್ಲಿ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಗೆ ಸದುದ್ದೇಶದಿಂದ ಕೆಲಸ ಮಾಡುತ್ತಿರುವುದನ್ನು ವಿವರಿಸಿದರು. ಸಂಸ್ಥೆ ಸಂಶೋಧನೆ, ಪ್ರತಿಭೆ ಮತ್ತು ಸಹಯೋಗದ ಆಧಾರದ ಮೇಲೆ ಕರ್ನಾಟಕವನ್ನು ಜಾಗತಿಕ ಮಟ್ಟದಲ್ಲಿ ಕ್ವಾಂಟಮ್ ಉನ್ನತಿಯನ್ನು ತಲುಪಿಸಬೇಕೆಂಬ ಗುರಿ ಹೊಂದಿದೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಕೆಸ್ಟೆಪ್ಸ್‌ ನಿರ್ದೇಶಕರಾದ ಸದಾಶಿವ ಪ್ರಭು, ಕ್ಯೂಪೈ ಸಂಸ್ಥಾಪಕರಾದ ನಾಗೇಂದ್ರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: DK ShivakumarINCKwantamKwantam ImagingKwantam NetworkingN S BhosarajNagendraSadashiva Prabhusiddaramaiah
Previous Post

Zameer Ahmed: ಲಂಚ ಹಗರಣ: ರಾಜ್ಯ ʻಕೈʼ ನಾಯಕರಿಗೆ ಹೈಕಮಾಂಡ್‌ ಕ್ಲಾಸ್..!

Next Post

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada