• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
June 26, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ (Male Mahadeshwara Forest) ವಲಯದಲ್ಲಿ ತಾಯಿ ಹುಲಿ ಮತ್ತು 3 ಮರಿಗಳ ಅಸಹಜವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ವಿಷಪ್ರಾಶನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರು ತನಿಖೆಗೆ ಆದೇಶಿಸಿದ್ದಾರೆ.

ADVERTISEMENT

ಚಾಮರಾಜನಗರ ಜಿಲ್ಲೆಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್​ ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಾಂಸದಲ್ಲಿ ವಿಷ ಹಾಕಿ ತಾಯಿ ಹುಲಿ ಹಾಗೂ ಮೂರು ಮರಿಗಳನ್ನು ಕೊಂದಿರುವ ಶಂಕೆ ವ್ತಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ತ್ವರಿತ ತನಿಖೆಗೆ ಪ್ರಾರಂಭವಾಗಿದೆ. ಈ ನಿಷ್ಕರಣೆಯ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪಿಸಿಸಿಎಫ್ (PCCF) ಅವರ ನೇತೃತ್ವದಲ್ಲಿ ತಕ್ಷಣ ತನಿಖೆ ನಡೆಸುವಂತೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ 563 ಹುಲಿಗಳೊಂದಿಗೆ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ. ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.

ಅರಣ್ಯ ಸಚಿವ ಖಂಡ್ರೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ,’4 ಹುಲಿಗಳ ಅಸಹಜ ಸಾವಿಗೆ ಕಾರಣವಾದ ವಿಷಯವನ್ನು ಆಳವಾಗಿ ಪರಿಶೀಲಿಸಿ, ತನಿಖೆ ನಡೆಸಬೇಕು. ಅರಣ್ಯ ಸಿಬ್ಬಂದಿಯಿಂದ ನಿರ್ಲಕ್ಷ್ಯ ನಡೆದಿದೆ ಎಂಬುದಾದರೆ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ಘಟನೆ ವಿಷಪ್ರಾಶನದ ಫಲಿತಾಂಶವಲ್ಲವೆಂಬುದು ಸಾಬೀತಾದರೆ, ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Tags: ChamarajanagarDK ShivakumarEshwar Khandreforest ministerIFOMale Mahadeshwara ForestMale Mahadeshwara TempleMysorePCCFsiddaramaiahTigers
Previous Post

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Next Post

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada