ರಾಜ್ಯದ ರೈತರಿಗೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸಿಹಿಸುದ್ದಿ ನೀಡಿದ್ದು, ರಾಜ್ಯದ 224 ಕ್ಷೇತ್ರಗಳಲ್ಲೂ ಈ ವರ್ಷದಲ್ಲಿ ಪಶು ಸಂಜೀವಿನಿ ಯೋಜನೆ ವಿಸ್ತರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, “ಈ ವರ್ಷದಲ್ಲಿ 224 ಕ್ಷೇತ್ರಗಳಲ್ಲೂ ಪಶು ಸಂಜೀವಿನಿ ಯೋಜನೆ ಪ್ರಾರಂಭಿಸುತ್ತಿದ್ದೇವೆ. ಕಾಲುಬಾಯಿ ರೋಗಕ್ಕೆ ಈಗಾಗಲೇ 12 ಜಿಲ್ಲೆಗಳಲ್ಲಿ ಔಷಧಿ ರವಾನಿಸಿದ್ದು, ತಿಂಗಳಾಂತ್ಯ ವೇಳೆಗೆ ಎಲ್ಲ ಜಿಲ್ಲೆಗಳಿಗೂ ಒದಗಿಸುವಂತೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಶುವೈದ್ಯರ ಕೊರತೆ ತೀವ್ರವಾಗಿ ಕಾಡುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಶೀಘ್ರವೇ ಪಶುವೈದ್ಯರ ನೇಮಕ ಮಾಡಿಕೊಳ್ಳಲಾಗುವುದು ಎಂದು ಭರಸವೆ ನೀಡಿದರು.