• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಜಿಲ್ಲಾ ಕಾರ್ಯಾಲಯದ ಅಂತಿಮ ಸಿದ್ಧತೆಗಳ ವೀಕ್ಷಿಸಿದ ಸಚಿವ ಪ್ರಭು ಚವ್ಹಾಣ

Any Mind by Any Mind
December 14, 2022
in ಕರ್ನಾಟಕ, ರಾಜಕೀಯ
0
ಬಿಜೆಪಿ ಜಿಲ್ಲಾ ಕಾರ್ಯಾಲಯದ ಅಂತಿಮ ಸಿದ್ಧತೆಗಳ ವೀಕ್ಷಿಸಿದ ಸಚಿವ ಪ್ರಭು ಚವ್ಹಾಣ
Share on WhatsAppShare on FacebookShare on Telegram

ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ನಗರದ ನೌಬಾದನಲ್ಲಿ ನಿರ್ಮಿಸಲಾಗಿರುವ ನೂತನ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಬುಧವಾರ ಭೇಟಿ ನೀಡಿ, ಕಟ್ಟಡದ ವಾಸ್ತುಶಾಂತಿ ಹಾಗೂ ಉದ್ಘಾಟನಾ ಸಮಾರಂಭದ ಅಂತಿಮ ಹಂತದ ಸಿದ್ಧತೆಗಳನ್ನು ವೀಕ್ಷಿಸಿದ್ದಾರೆ.

ADVERTISEMENT

ಕಾರ್ಯಾಲಯದ ವಿವಿಧ ಕೋಣೆಗಳು ಮತ್ತು ಆವರಣದಲ್ಲಿ ಸಂಚರಿಸಿ ಕಟ್ಟಡ ಕಾಮಗಾರಿಯ ಬಗ್ಗೆ ಪ್ರಮುಖರಿಂದ ಮಾಹಿತಿ ಪಡೆದರು. ಬಹುತೇಕ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಅಂತಿಮ ಹಂತದ ಸಣ್ಣಪುಟ್ಟ ಕೆಲಸಗಳು ಮಾತ್ರ ಬಾಕಿ ಉಳಿದಿವೆ‌. ಹಗಲಿರುಳೆನ್ನದೇ ಕೆಲಸ ಮಾಡಲಾಗುತ್ತಿದೆ ಎಂದು ಪ್ರಮುಖರು ಮಾಹಿತಿ ನೀಡಿದ್ದಾರೆ.

ಪಕ್ಷದ ನೂತನ ಕಾರ್ಯಾಲಯದ ವಾಸ್ತುಶಾಂತಿ ಹಾಗೂ ಉದ್ಘಾಟನಾ ಸಮಾರಂಭದ ವೇದಿಕೆ ಸ್ಥಳಕ್ಕೆ ತೆರಳಿ ಅಂತಿಮ ಹಂತದ ತಯಾರಿಗಳನ್ನು ವೀಕ್ಷಿಸಿದರು. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಅಸಂಖ್ಯಾತ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಪೆಂಡಾಲ್ ಹಾಕಬೇಕು. ಕಾರ್ಯಕ್ರಮದ ವೇದಿಕೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಬೇಕೆಂದು ಆಯೋಜಕರಿಗೆ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಸಚಿವರು, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಪಕ್ಷದ ಕಾರ್ಯಾಲಯ ಇರಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಪ್ರಮುಖರ ಆಶಯವಾಗಿದೆ. ವರಿಷ್ಠರ ಆಶಯದಂತೆ ಜನಪ್ರತಿನಿಧಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಎಲ್ಲ ಕಾರ್ಯಕರ್ತರ ಸಹಕಾರ ಮತ್ತು ಪರಿಶ್ರಮದಿಂದಾಗಿ ಬೀದರ ಜಿಲ್ಲೆಯಲ್ಲಿಯೂ ಭವ್ಯವಾದ ಪಕ್ಷದ ಕಾರ್ಯಾಲಯವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾ ಅವರು ವರ್ಚ್ಯುವಲ್ ಮೂಲಕ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸುವರು‌. ಹಲವು ದಿನಗಳ ಕನಸು ಸಾಕಾರಗೊಳ್ಳುತ್ತಿರುವುದಕ್ಕೆ ಅತ್ಯಂತ ಸಂತೋಷವಾಗುತ್ತಿದೆ ಎಂದು ಸಂತಸ ವ್ಯಕ್ತ ಪಡಿಸಿದ್ದಾರೆ.

ನೌಬಾದನಲ್ಲಿರುವ ಪಕ್ಷದ ಜಿಲ್ಲಾ ಕಛೇರಿ ಆವರಣದಲ್ಲಿ ಡಿಸೆಂಬರ್ 15ರ ಬೆಳಗ್ಗೆ 10 ಗಂಟೆಗೆ ನಡೆಯುವ ಅಭೂತಪೂರ್ವ ಕಾರ್ಯಕ್ರಮಕ್ಕೆ ಎಲ್ಲ ತಾಲ್ಲೂಕುಗಳಿಂದ ಕಾರ್ಯಕರ್ತರೆಲ್ಲರೂ ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

FM Sitharaman’s Reply : ಹಣದುಬ್ಬರವನ್ನ ನಿಯಂತ್ರಿಸಲು ಕೇಂದ್ರ ಸರ್ಕಾರ ಮತ್ತಷ್ಟು ಕ್ರಮ ವಹಿಸಿದೆ | Pratidhvani

Next Post

ಆಂಬ್ಯುಲೆನ್ಸ್ ನಲ್ಲಿ ಡ್ರಗ್ಸ್ ಸಾಗಾಟ; ಓರ್ವನ ಬಂಧನ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಆಂಬ್ಯುಲೆನ್ಸ್ ನಲ್ಲಿ ಡ್ರಗ್ಸ್ ಸಾಗಾಟ; ಓರ್ವನ ಬಂಧನ

ಆಂಬ್ಯುಲೆನ್ಸ್ ನಲ್ಲಿ ಡ್ರಗ್ಸ್ ಸಾಗಾಟ; ಓರ್ವನ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada