• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ, ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ

Any Mind by Any Mind
July 23, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಶಾಲು ಹಾಕೊಂಡ್ರೆ ಎಲ್ಲವೂ ಪರಿಹಾರ ಆಗುತ್ತದೆ : ಪ್ರಿಯಾಂಕ ಖರ್ಗೆ ಟೀಕೆ
Share on WhatsAppShare on FacebookShare on Telegram

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲಾ ಜಿಲ್ಲಾ ಪಮಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತಯಾರಾದ ನಿಯೋಜಿತ ರೂಪುರೇಷೆ (ಕಂಟಿನ್ಜೆನ್ಸಿ ಪ್ಲಾನ್) ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಸರ್ಕಾರದ ವತಿಯಿಂದ ₹5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ ಈವರೆಗೂ ಒಟ್ಟು ₹6.14 ಕೋಟಿ ಹಣ ನೀಡಿದಂತಾಗಿದೆ.

ADVERTISEMENT
ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಸರ್ಕಾರದ ಕ್ರಮ
ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಕ್ರಮ

ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಬರದ ಛಾಯೆ ಎದುರಾಗುವ ಮುನ್ನವೇ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (CEOಗಳ) ಸಭೆ ಕರೆದು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

ಈ ಬಗ್ಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿ 2 ಸಭೆಗಳನ್ನು ನಡೆಸಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸ್ಪಷ್ಟ ಚಿತ್ರಣ ರೂಪಿಸಿದೆ. ರಾಜ್ಯದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತೇವೆ ಎಂದು ಶಾಸನ ಸಭೆಯಲ್ಲೂ ಸರ್ಕಾರ ಪುನರುಚ್ಚರಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲಾ ಜಿಲ್ಲೆಗಳ CEOಗಳೊಂದಿಗೆ ಕಳೆದ ಒಂದು ತಿಂಗಳಲ್ಲಿ 2 ವಿಸ್ತ್ರತ ಸಭೆ ನಡೆಸಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಪೂರ್ವ ನಿಯೋಜಿತ ರೂಪುರೇಷೆಯನ್ನ (ಕಂಟಿನ್ಜೆನ್ಸಿ ಪ್ಲಾನ್) ತಯಾರಿಸುವಂತೆ ಸೂಚನೆ ನೀಡಲಾಗಿತ್ತು.

ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಸರ್ಕಾರದ ಕ್ರಮ
ಕುಡಿಯುವ ನೀರಿನ ಬವಣೆ ಬಗೆ ಹರಿಯಲು ಪರಿಹಾರ ಬಿಡುಗಡೆ

ಇದೀಗ ಆ ವರದಿ ಪ್ರಕಾರ ಜಿಲ್ಲಾವಾರು ಎಷ್ಟು ತಾಲೂಕುಗಳಲ್ಲಿ ಮಳೆಯಾಗಿದೆ? ಎಷ್ಟು ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನ ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಎಲ್ಲಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತಯಾರಾದ ನಿಯೋಜಿತ ರೂಪುರೇಷೆ (ಕಂಟಿನ್ಜೆನ್ಸಿ ಪ್ಲಾನ್) ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಸರ್ಕಾರದ ವತಿಯಿಂದ ₹5.14 ಕೋಟಿ ಹಣವನ್ನ ಬಿಡುಗಡೆ… pic.twitter.com/G0rjZC0q9W

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) July 23, 2023

ವರದಿಯಲ್ಲಿ ನೀಡಿರುವಂತೆ ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಗಳಲ್ಲಿ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನ ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರನ್ನು ಜನರಿಗೆ ಸರಬರಾಜು ಮಾಡಲೂ ಹಣ ಒದಗಿಸಲಾಗಿದೆ.

ಒಟ್ಟು ಟ್ಯಾಂಕರ್ ನೀರು ಪೂರೈಕೆಗೆ ₹4.21 ಕೋಟಿ ಹಣವನ್ನ ನೀಡಲಾಗಿದ್ದು, ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯಲು 93 ಲಕ್ಷ ಹಣವನ್ನ ನೀಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುನ್ನಚ್ಚರಿಕೆಯಿಂದ ಸರ್ಕಾರ ಸರ್ವ ಸನ್ನದ್ಧವಾಗಿದೆ.

Previous Post

ಕಲುಷಿತ ನೀರು ಸರಬರಾಜು ವಿಚಾರ, ಕ್ರಮಕ್ಕೆ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಸೂಚನೆ

Next Post

ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್‌

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ಮಳೆ ಪೀಡಿತ ಪ್ರದೇಶಗಳಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಭೇಟಿ

ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada