ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಬುಧವಾರ (ಆಗಸ್ಟ್ 30) ಭೇಟಿ ನೀಡಿ ಪರಿಶೀಲಿಸಿದರು.

ಕ್ರೀಡಾಂಗಣದಲ್ಲಿ ಮೂಲಭೂತ ಸೌಲಭ್ಯ ಒದಗಿಸಿ ಅಭಿವೃದ್ದಿಪಡಿಸುವುದರ ಜೊತೆಗೆ ಕ್ರೀಡಾಂಗಣದಲ್ಲಿರುವ ಹಳೆಯ ಕಟ್ಟಡಗಳನ್ನು ನವೀಕರಸಬಹುದೇ ಅಥವಾ ಕೆಡವಿ ಆ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಬೇಕೇ ಎನ್ನುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಚಿವರು ಈ ಸಂದರ್ಭದಲ್ಲಿ ಬಾಸ್ಕೇಟ್ ಬಾಲ್, ಹಾಕಿ, ಈಜುಕೊಳ, ಸೆಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಜೂಡೋ ಅಂಕಣಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,ಜಿಪಂ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಭಂವರ್ ಕುಮಾರ ಮೀನಾ, ಪೊಲೀಸ್ ಕಮೀಷನರ್ ಆರ್ ಚೇತನ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಯುವಜನಸೇವೆ ಸಹಾಯಕ ನಿರ್ದೇಶಕಿ ಗಾಯತ್ರಿ ಸೇರಿದಂತೆ ಮತ್ತಿತರಿದ್ದರು.






